", "articleSection": "News", "image": { "@type": "ImageObject", "url": "https://prod.cdn.publicnext.com/s3fs-public/38633520250901045125filescapture.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "Suresh Gadag" }, "editor": { "@type": "Person", "name": "9113093241" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಗದಗ: ಸಮಗ್ರ ಮೀನುಗಾರಿಕೆ ಸಾಕಾಣಿಕೆ ಗ್ರಾಮೀಣ ಮಹಿಳೆಯರ ಸ್ವಾವಲಂಬನೆಯತ್ತ ಸಾಗಲು ಇರುವ ಮಹತ್ತರ ಹೆಜ್ಜೆಯಾಗಿದ್ದು, ಪ್ರಯೋಗಾತ್ಮಕವಾಗಿ ಮೀನುಗಾರಿ...Read more" } ", "keywords": "Node", "url": "https://dashboard.publicnext.com/node" }
ಗದಗ: ಸಮಗ್ರ ಮೀನುಗಾರಿಕೆ ಸಾಕಾಣಿಕೆ ಗ್ರಾಮೀಣ ಮಹಿಳೆಯರ ಸ್ವಾವಲಂಬನೆಯತ್ತ ಸಾಗಲು ಇರುವ ಮಹತ್ತರ ಹೆಜ್ಜೆಯಾಗಿದ್ದು, ಪ್ರಯೋಗಾತ್ಮಕವಾಗಿ ಮೀನುಗಾರಿಕೆ ಕಲಿಕೆಯನ್ನು ಒದಗಿಸುತ್ತಿರುವುದು ಶ್ಲಾಘನೀಯವಾಗಿದೆ ಎಂದು ಜಿಲ್ಲಾಧಿಕಾರಿ ಶ್ರೀ ಸಿ.ಎನ್. ಶ್ರೀಧರ ಅವರು ತಿಳಿಸಿದರು.
ಗದಗ ತಾಲೂಕಿನ ಹುಲಕೋಟಿಯಲ್ಲಿ ಜಿಲ್ಲೆಯ ವಿವಿಧ ತಾಲೂಕಿನ ಸ್ವ-ಸಹಾಯ ಗುಂಪುಗಳ ಸದಸ್ಯರಿಗೆ ಹಮ್ಮಿಕೊಂಡ ಸಮಗ್ರ ಮೀನುಗಾರಿಕೆ ಸಾಕಾಣಿಕೆ ಮತ್ತು ನಿರ್ವಹಣೆ ಕುರಿತು ಎರಡು ದಿನಗಳ ತರಬೇತಿ ಶಿಬಿರವನ್ನು ಸಸಿಗೆ ನೀರು ಹಾಕುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.
ಈಗಾಗಲೇ ಸಂಜೀವಿನಿ ಯೋಜನೆಯ ಮೂಲಕ ಗ್ರಾಮೀಣ ಮಹಿಳೆಯರು ಆರ್ಥಿಕ ಮುಂದೆ ಬಂದಿದ್ದಾರೆ. ಅದೇ ರೀತಿ ಮೀನುಗಾರಿಕೆಯನ್ನು ಸಹ ವೈಜ್ಞಾನಿಕವಾಗಿ ಮಾಡುವ ಮೂಲಕ ಯಶಸ್ಸು ಗಳಿಸುವತ್ತ ದಿಟ್ಟ ಹೆಜ್ಜೆ ಹಾಕುವಂತೆ ಪ್ರೋತ್ಸಾಹಿಸಿದರು.
ಮೀನುಗಾರಿಕೆ ಇಲಾಖೆ ಉಪನಿರ್ದೇಶಕರು ನಾಗರಾಜರವರು ಮಾತನಾಡಿ, ಮೀನುಗಾರಿಕೆಯನ್ನು ವೈಜ್ಞಾನಿಕ ರೀತಿಯಲ್ಲಿ ಅಳವಡಿಸಿಕೊಂಡರೆ ಗ್ರಾಮೀಣ ಕುಟುಂಬಗಳಿಗೆ ಹೆಚ್ಚುವರಿ ಆದಾಯ ಗಳಿಕೆ ಮಾಡಬಹುದು. ಸ್ವ-ಸಹಾಯ ಗುಂಪುಗಳು
ಈ ತರಬೇತಿಯಲ್ಲಿ ಸಿಗುವ ಜ್ಞಾನವನ್ನು ಬಳಸಿಕೊಂಡು ಸಮೂಹವಾಗಿ ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದರು.
ಸಂಜೀವಿನಿ ಯೋಜನೆಯ ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕ ರಘುನಾಥ ಪಾಟೀಲ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ತರಬೇತಿಯಲ್ಲಿ ಕಲಿತ ತಂತ್ರಗಳನ್ನು ಕಾರ್ಯರೂಪಕ್ಕೆ ತಂದು, ಗುಂಪಿನ ಸದಸ್ಯರು ಸಮೂಹ ಆಧಾರಿತ ಉತ್ಪಾದನೆ ಮಾಡಿದರೆ, ಮಾರುಕಟ್ಟೆ ಸಂಪರ್ಕ ಸುಲಭವಾಗುತ್ತದೆ ಎಂದು ತಿಳಿಸಿದರು.
Kshetra Samachara
01/09/2025 04:51 pm