", "articleSection": "Politics", "image": { "@type": "ImageObject", "url": "https://prod.cdn.publicnext.com/s3fs-public/474799-1756728411-17-08-2025.03_13_36_10.Still195.png", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "ManjuVijayapura" }, "editor": { "@type": "Person", "name": "Pavan.Badiger" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ವಿಜಯಪುರ: ಬಸವ ಸಂಸ್ಕೃತಿ ಅಭಿಯಾನ ಲಿಂಗಾಯತ ಸಂಸ್ಕೃತಿಯ ಪ್ರಚಾರ, ಪ್ರಸಾರ ಎಂದು ತಿಳಿದುಕೊಳ್ಳಿ. ಹೀಗಾಗಿ ಇದು ಪ್ರತ್ಯೇಕ ಲಿಂಗಾಯತ ಧರ್ಮದ ಹೋರಾಟ...Read more" } ", "keywords": "Vijayapura, Basava culture campaign, separate Lingayat religion, S M Jamadar, religious movement, Basava philosophy, Lingayat community, Karnataka politics, cultural campaign, Vijayapura news ", "url": "https://dashboard.publicnext.com/node" }
ವಿಜಯಪುರ: ಬಸವ ಸಂಸ್ಕೃತಿ ಅಭಿಯಾನ ಲಿಂಗಾಯತ ಸಂಸ್ಕೃತಿಯ ಪ್ರಚಾರ, ಪ್ರಸಾರ ಎಂದು ತಿಳಿದುಕೊಳ್ಳಿ. ಹೀಗಾಗಿ ಇದು ಪ್ರತ್ಯೇಕ ಲಿಂಗಾಯತ ಧರ್ಮದ ಹೋರಾಟ ಎಂದರೂ ತಪ್ಪಲ್ಲ ಎಂದು ಜಾಗತಿಕ ಲಿಂಗಾಯತ ಮಹಾಸಭಾ ಪ್ರಧಾನ ಕಾರ್ಯದರ್ಶಿ ಎಸ್.ಎಂ. ಜಾಮದಾರ್ ಹೇಳಿದರು.
ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಾಗೇವಾಡಿಯಲ್ಲಿ ಬಸವ ಸಂಸ್ಕೃತಿ ಅಭಿಯಾನ ಆರಂಭ ಮಾಡಿದ್ದೇವೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಯಾತ್ರೆ ಸಂಚಾರ ಮಾಡಿ ಧರ್ಮದ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ. ಸಚಿವ ಶಿವಾನಂದ ಪಾಟೀಲ್ ಸೇರಿದಂತೆ ಬಸವ ಪರ ಸಂಘಟನೆಗಳು ಕಾರ್ಯಕ್ರಮಕ್ಕೆ ಬೆಂಬಲ ನೀಡಿವೆ.
ನಾಳೆ ಕಲಬುರ್ಗಿ ಹಾಗೂ ಬೀದರ್ ನಲ್ಲಿ ದೊಡ್ಡ ಕಾರ್ಯಕ್ರಮ ನಡೆಯಲಿದೆ. ಪ್ರತ್ಯೇಕ ಲಿಂಗಾಯತ ಧರ್ಮ ಹೋರಾಟಕ್ಕಿಂತ ಸಮಾಜದ ಪ್ರಚಾರ ಎಂದು ಭಾವಿಸಿ 2018 ರಲ್ಲಿ ಕರ್ನಾಟಕ ಸರ್ಕಾರ ಪ್ರತ್ಯೇಕ ಲಿಂಗಾಯತ ಧರ್ಮದ ಬಗ್ಗೆ ಆದೇಶ ಮಾಡಿದೆ.
ಆದರೆ, ಜಾರಿಗೆ ಬರಬೇಕಾದರೆ ಕೇಂದ್ರ ಸರ್ಕಾರ ಆದೇಶ ಹೊರಡಿಸಬೇಕಿದೆ.
ಕೇಂದ್ರ ಸರ್ಕಾರ ಕೆಲವು ಪ್ರಶ್ನೆ ಕೇಳಿದ್ದು, ಅದಕ್ಕೆ ರಾಜ್ಯ ಸರ್ಕಾರ ಉತ್ತರ ನೀಡಬೇಕು. ಲಿಂಗಾಯತ ಅಲ್ಪಸಂಖ್ಯಾತ ಧರ್ಮ ಎಂದು ಈ ಹಿಂದೆಯೇ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಹಿಂದೆ ನಡೆದ ಲಿಂಗಾಯತ ಹೋರಾಟ ರಾಜಕೀಯವಾಗಿತ್ತು. ಇವತ್ತು ಧಾರ್ಮಿಕವಾಗಿ ಹೋರಾಟ ನಡೆಯುತ್ತಿದೆ. ಜನರಲ್ಲಿ ಹೋರಾಟದ ಬಗ್ಗೆ ಜಾಗೃತಿ ಮೂಡಿದೆ ಎಂದರು.
Kshetra Samachara
01/09/2025 05:37 pm