", "articleSection": "Law and Order,Accident", "image": { "@type": "ImageObject", "url": "https://prod.cdn.publicnext.com/s3fs-public/43124920250902031813filescapture.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "PraveenKarawar" }, "editor": { "@type": "Person", "name": "9964135886" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಕಾರವಾರ: ನಗರದ ಹೆದ್ದಾರಿಯಲ್ಲಿರುವ ಸುರಂಗ ಮಾರ್ಗದಲ್ಲಿ ತಡರಾತ್ರಿ ಸಂಭವಿಸಿದ ಕಾರು ಅಪಘಾತದಲ್ಲಿ ಓರ್ವ ಯುವಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಗೋವ...Read more" } ", "keywords": "Karwar tunnel accident, car crash Karwar, youth dies in tunnel accident, Karwar road accident news, Karnataka car accident, fatal accident Karwar, tunnel mishap Karwar, Karwar latest updates, road safety Karnataka, Karwar youth death news", "url": "https://dashboard.publicnext.com/node" }
ಕಾರವಾರ: ನಗರದ ಹೆದ್ದಾರಿಯಲ್ಲಿರುವ ಸುರಂಗ ಮಾರ್ಗದಲ್ಲಿ ತಡರಾತ್ರಿ ಸಂಭವಿಸಿದ ಕಾರು ಅಪಘಾತದಲ್ಲಿ ಓರ್ವ ಯುವಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಗೋವಾ ಕಡೆಯಿಂದ ಅಂಕೋಲಾ ಕಡೆಗೆ ತೆರಳುತ್ತಿದ್ದ ಅಲ್ಟೋ ಕಾರಿನ ಚಾಲಕ, ಎದುರಿಗೆ ಬರುತ್ತಿದ್ದ ಇನ್ನೊಂದು ವಾಹನವನ್ನು ಓವರ್ಟೇಕ್ ಮಾಡಲು ಪ್ರಯತ್ನಿಸಿದಾಗ ವಾಹನದ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ದುರಂತದಲ್ಲಿ ಕಾರು ಚಾಲಕನಾಗಿದ್ದ ಪುತ್ತೂರು ಮೂಲದ ರಂಜಿತ್ ವಿಶ್ವನಾಥ ನಾಯ್ಕ(28) ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಮೃತನಾಗಿರುವ ರಂಜಿತ್ ಗೋವಾದಿಂದ ಪುತ್ತೂರಿಗೆ ಪ್ರಯಾಣಿಸುತ್ತಿದ್ದ. ಈ ಅಪಘಾತವು ತಡರಾತ್ರಿ ಸುಮಾರು 2-30ಕ್ಕೆ ಕಾರವಾರ ಟ್ರಾಫಿಕ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದೆ. ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Kshetra Samachara
02/09/2025 03:18 pm