", "articleSection": "Crime,Accident", "image": { "@type": "ImageObject", "url": "https://prod.cdn.publicnext.com/s3fs-public/421698-1756820219-019~1.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "AnandChitradurga" }, "editor": { "@type": "Person", "name": "suman.k" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಚಿತ್ರದುರ್ಗ: ಚಿತ್ರದುರ್ಗ ತಾಲ್ಲೂಕಿನ ರಾಷ್ಟ್ರೀಯ ಹೆದ್ದಾರಿ-4 ರ ಸೀಬಾರ ಬಳಿ ಭೀಕರ ಅಪಘಾತದಲ್ಲಿ ಬೈಕ್ ಸವಾರ ಸಾವನ್ನಪ್ಪಿದ ಘಟನೆ ನಡೆದಿದೆ. ಚಳ...Read more" } ", "keywords": "Chitradurga,unscientific divider,victim,barrier collision,bike rider death,road accident,local news,Karnataka,unscientific road design", "url": "https://dashboard.publicnext.com/node" } ಚಿತ್ರದುರ್ಗ: ಅವೈಜ್ಞಾನಿಕ ಡಿವೈಡರ್‌ಗೆ ಬಲಿ - ತಡೆಗೋಡೆಗೆ ಡಿಕ್ಕಿ ಹೊಡೆದು ಬೈಕ್ ಸವಾರ ಸಾವು
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಿತ್ರದುರ್ಗ: ಅವೈಜ್ಞಾನಿಕ ಡಿವೈಡರ್‌ಗೆ ಬಲಿ - ತಡೆಗೋಡೆಗೆ ಡಿಕ್ಕಿ ಹೊಡೆದು ಬೈಕ್ ಸವಾರ ಸಾವು

ಚಿತ್ರದುರ್ಗ: ಚಿತ್ರದುರ್ಗ ತಾಲ್ಲೂಕಿನ ರಾಷ್ಟ್ರೀಯ ಹೆದ್ದಾರಿ-4 ರ ಸೀಬಾರ ಬಳಿ ಭೀಕರ ಅಪಘಾತದಲ್ಲಿ ಬೈಕ್ ಸವಾರ ಸಾವನ್ನಪ್ಪಿದ ಘಟನೆ ನಡೆದಿದೆ. ಚಳ್ಳಕೆರೆ ತಾಲೂಕಿನ ಉಪ್ಪಾರಹಟ್ಟಿ ಗ್ರಾಮದ ನಿವಾಸಿ ಶಿವಕುಮಾರ್ ಮೃತ ದುರ್ದೈವಿ.

ಇಂದು ಮಧ್ಯಾಹ್ನ ಅಪಘಾತ ಸಂಭವಿಸಿದ್ದು, ಶಿವಕುಮಾರ್ ಗಂಭೀರ ಗಾಯಗೊಂಡು ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ. ಮೃತ ಶಿವಕುಮಾರ್ ಮೆಡಿಕಲ್ ಸ್ಟೋರ್‌ಗಳಿಗೆ ಔಷಧಿ ಸರಬರಾಜು ಮಾಡುವ ಕೆಲಸ ಮಾಡುತ್ತಿದ್ದ.

ಚಿತ್ರದುರ್ಗದಿಂದ ದಾವಣಗೆರೆ ಕಡೆಗೆ ಹೋಗುತ್ತಿದ್ದ ವೇಳೆ ಬೈಕ್ ವೇಗವಾಗಿ ಬಂದು ಕಬ್ಬಿಣದ ತಡೆಗೋಡೆಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಸವಾರ ಸ್ಥಳದಲ್ಲೇ ಪ್ರಾಣಬಿಟ್ಟಿದ್ದಾನೆ.

ಈ ಪ್ರದೇಶದಲ್ಲಿ ಅವೈಜ್ಞಾನಿಕ ಡಿವೈಡರ್‌ಗಳ ನಿರ್ಮಾಣದಿಂದಾಗಿ ಆಗಾಗ್ಗೆ ಅಪಘಾತಗಳು ಸಂಭವಿಸುತ್ತಿವೆ. ಹೆದ್ದಾರಿಗೆ ಸಂಪರ್ಕಿಸುವ ಸರ್ವಿಸ್ ರಸ್ತೆ ಚಿಕ್ಕದಾಗಿದ್ದು, ಜೊತೆಗೆ ಡಿವೈಡರ್ ನಿರ್ಮಿಸಿದ್ದರಿಂದ ವಾಹನಗಳ ನಿಯಂತ್ರಣ ತಪ್ಪಿ ಅಪಘಾತಗಳು ಸಂಭವಿಸುತ್ತಿವೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಘಟನಾ ಸ್ಥಳಕ್ಕೆ ಚಿತ್ರದುರ್ಗ ಗ್ರಾಮಾಂತರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Edited By : Suman K
Kshetra Samachara

Kshetra Samachara

02/09/2025 07:07 pm

Cinque Terre

7.62 K

Cinque Terre

0

ಸಂಬಂಧಿತ ಸುದ್ದಿ