", "articleSection": "Government", "image": { "@type": "ImageObject", "url": "https://prod.cdn.publicnext.com/s3fs-public/38659820250902075305filescapture.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "KumarTumakur" }, "editor": { "@type": "Person", "name": "9844461373" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": " ತುಮಕೂರು: ಜಿಲ್ಲೆಯ ಉಪವಿಭಾಗಾಧಿಕಾರಿಗಳ ಕೋರ್ಟುಗಳಲ್ಲಿ ಪಿಟಿಸಿಎಲ್ ಸಂಬಂಧಿಸಿದ 588 ಪ್ರಕರಣಗಳು ಬಾಕಿ ಇರುವ ಹಿನ್ನೆಲೆಯಲ್ಲಿ, ಅವುಗಳನ್ನು ಶೀ...Read more" } ", "keywords": "Tumakuru PTCL cases, Tumakuru district PTCL cases, PTCL land dispute Karnataka, PTCL cases fast disposal, Tumakuru Deputy Commissioner orders, DC strict orders Tumakuru, PTCL property cases Karnataka, land dispute resolution Tumakuru, Karnataka PTCL act cases, Tumakuru district land cases", "url": "https://dashboard.publicnext.com/node" }
ತುಮಕೂರು: ಜಿಲ್ಲೆಯ ಉಪವಿಭಾಗಾಧಿಕಾರಿಗಳ ಕೋರ್ಟುಗಳಲ್ಲಿ ಪಿಟಿಸಿಎಲ್ ಸಂಬಂಧಿಸಿದ 588 ಪ್ರಕರಣಗಳು ಬಾಕಿ ಇರುವ ಹಿನ್ನೆಲೆಯಲ್ಲಿ, ಅವುಗಳನ್ನು ಶೀಘ್ರ ವಿಲೇವಾರಿ ಮಾಡಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಕಂದಾಯ ಇಲಾಖೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ತುಮಕೂರು ಉಪವಿಭಾಗದಲ್ಲಿ 203, ಮಧುಗಿರಿ ಉಪವಿಭಾಗದಲ್ಲಿ 343 ಹಾಗೂ ತಿಪಟೂರು ಉಪವಿಭಾಗದಲ್ಲಿ 43 ಪ್ರಕರಣಗಳು ಬಾಕಿ ಇರುವುದನ್ನು ಉಲ್ಲೇಖಿಸಿ, ವಿಳಂಬವಿಲ್ಲದೆ ಬಾಕಿ ಪ್ರಕರಣಗಳನ್ನು ಸಕಾಲದಲ್ಲಿ ಇತ್ಯರ್ಥಗೊಳಿಸುವಂತೆ ನಿರ್ದೇಶಿಸಿದರು.
ಜಿಲ್ಲೆಯಲ್ಲಿ ದಾಖಲೆ ರಹಿತ ಜನವಸತಿಗಳನ್ನು ಗುರುತಿಸಿ ಕಂದಾಯ ಗ್ರಾಮಗಳನ್ನಾಗಿ ಘೋಷಿಸುವ ಕಾರ್ಯವೇಗವಾಗಿ ನಡೆಯುತ್ತಿದ್ದು, ಇನ್ನೂ ಗುರುತಿಸದ ಗ್ರಾಮಗಳ ಮಾಹಿತಿ ಸಾರ್ವಜನಿಕರು 7304975516 ಅಥವಾ 0816-2213400 ಮೂಲಕ ನೀಡಬಹುದೆಂದು ಜನರಲ್ಲಿ ಜಾಗೃತಿ ಮೂಡಿಸುವಂತೆ ಅವರು ತಿಳಿಸಿದರು. ಹಟ್ಟಿ, ತಾಂಡಾ, ಮಜರೆ ಮುಂತಾದ ವಸತಿಗಳನ್ನು ಕಂದಾಯ ಗ್ರಾಮಗಳನ್ನಾಗಿ ಮಾಡಿ ರಸ್ತೆ, ನೀರು, ವಿದ್ಯುತ್ ಸೇರಿದಂತೆ ಮೂಲಭೂತ ಸೌಲಭ್ಯಗಳನ್ನು ಒದಗಿಸಬೇಕೆಂದರು.
ಮೇ 2025ರ ಅಂತ್ಯದ ವೇಳೆಗೆ ಒಟ್ಟು 522 ಕಂದಾಯ ಗ್ರಾಮಗಳನ್ನು ಗುರುತಿಸಲಾಗಿದ್ದು, 521 ಗ್ರಾಮಗಳಿಗೆ ಪ್ರಾಥಮಿಕ ಅಧಿಸೂಚನೆ, 472 ಗ್ರಾಮಗಳಿಗೆ ಅಂತಿಮ ಅಧಿಸೂಚನೆ ಹೊರಡಿಸಲಾಗಿದೆ. ಇದುವರೆಗೆ 8056 ಹಕ್ಕು ಪತ್ರ ವಿತರಣಾ ಪ್ರಕ್ರಿಯೆ ಆರಂಭವಾಗಿದೆ. ಎರಡನೇ ಹಂತದಲ್ಲಿ 562 ಹೊಸ ಕಂದಾಯ ಗ್ರಾಮಗಳನ್ನು ಗುರುತಿಸಲಾಗಿದ್ದು, ಇದರಲ್ಲಿ 20000 ಹಕ್ಕು ಪತ್ರಗಳನ್ನು ವಿತರಿಸುವ ಉದ್ದೇಶವಿದೆ ಎಂದು ಅವರು ತಿಳಿಸಿದರು.
ದರಖಾಸ್ತು ಪೋಡಿ ಪ್ರಕರಣಗಳ ಕುರಿತು ಮಾತನಾಡಿದ ಡಿಸಿ, ಒಟ್ಟು 9904 ಪ್ರಕರಣಗಳಲ್ಲಿ 5051 ಅಳತೆ ಕಾರ್ಯ ಪೂರ್ಣಗೊಂಡಿದ್ದು, 1829 ಪ್ರಕರಣಗಳು ದುರಸ್ತಿ ಹಂತದಲ್ಲಿವೆ ಎಂದು ವಿವರಿಸಿದರು. ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ. ಎನ್. ತಿಪ್ಪೇಸ್ವಾಮಿ, ಉಪವಿಭಾಗಾಧಿಕಾರಿಗಳು, ತಹಶೀಲ್ದಾರರು ಹಾಗೂ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು.
Kshetra Samachara
02/09/2025 07:53 pm