ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಿಕ್ಕಬಳ್ಳಾಪುರ : ಹೆಂಡತಿಯ ಕಿರುಕುಳಕ್ಕೆ ಬೇಸತ್ತ ಪತಿ ಆತ್ಮಹತ್ಯೆ ಯತ್ನ

ಚಿಕ್ಕಬಳ್ಳಾಪುರ : ಹೆಂಡತಿಯ ಕಿರುಕುಳಕ್ಕೆ ಬೇಸತ್ತು ಗಂಡ ಆತ್ಮಹತ್ಯೆ ಯತ್ನ ಮಾಡಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಶೆಟ್ಟಿಗೆರೆ ಕ್ರಾಸ್ ಅರಣ್ಯ ಪ್ರದೇಶದಲ್ಲಿ ನಡೆದಿದೆ.

ಪತ್ನಿಯ ಕಿರಕುಳ ತಾಳಲಾರದೆ ಗಂಡ ರಾಮಾಂಜನಪ್ಪ (33) ಪಾಲಿಡಾಲ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದು, ಸಿನಿಮೀಯ ಶೈಲಿಯಲ್ಲಿ ಆತನನ್ನು ಪೊಲೀಸರು ರಕ್ಷಿಸಿದರು. ಗಂಡ ಹೆಂಡತಿ ಜಗಳ ಮಾಡಿಕೊಂಡು ಗಂಡ ಹೆಂಡತಿಯ ಕೋಪದ ಮೇಲೆ ಚಿಕ್ಕಬಳ್ಳಾಪುರ ತಾಲೂಕಿನ ಶೆಟ್ಟಿಗೆರೆ ಕ್ರಾಸ್ ಅರಣ್ಯ ಪ್ರದೇಶಕ್ಕೆ ತೆರಳಿ ಅಲ್ಲಿ ಯಾರಿಗೂ ತಿಳಿಯದಂತೆ ಬೈಕ್ ನಿಲ್ಲಿಸಿ ಪಾಲಿಡಾಲನ್ನು ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಈ ವೇಳೆ ಪೆರೇಸಂದ್ರ ಪೊಲೀಸ್ ಠಾಣೆಯ ಪಿಎಸ್ಐ ಜಗದೀಶ್ ರೆಡ್ಡಿ ಹಾಗೂ ಸಿಬ್ಬಂದಿ ರೌಂಡ್ಸ್ ಗೆ ಹೋದ ವೇಳೆ ಅನುಮಾನಾಸ್ಪದ ರೀತಿಯಲ್ಲಿ ಬೈಕ್ ಪತ್ತೆಯಾಗಿದ್ದು, ಬೈಕ್ ಆಧರಿಸಿ ಅರಣ್ಯ ಪ್ರದೇಶದಲ್ಲಿ ತನಿಖೆ ಮಾಡಿದ್ದ ಸಂದರ್ಭದಲ್ಲಿ ಈ ವ್ಯಕ್ತಿ ಪಾಲಿಡಾಲ್ ಕುಡಿದಿರುವುದು ತಿಳಿದು ಬಂದಿದೆ. ತಕ್ಷಣವೇ ಪೊಲೀಸರು ಪಾಲಿಡಾಲ್ ಕುಡಿದಿದ್ದ ರಾಮಾಂಜಿನಪ್ಪ ನನ್ನು ಭುಜದ ಮೇಲೆ ಎತ್ತಿಕೊಂಡು ರಕ್ಷಣೆ ಮಾಡಿದ್ದು, ಸದ್ಯ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಇನ್ನು ಈ ಪ್ರಕರಣ ಚಿಕ್ಕಬಳ್ಳಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿದೆ.

Edited By : Vinayak Patil
PublicNext

PublicNext

03/09/2025 01:00 pm

Cinque Terre

19.4 K

Cinque Terre

0

ಸಂಬಂಧಿತ ಸುದ್ದಿ