", "articleSection": "Infrastructure,Education,Government,News", "image": { "@type": "ImageObject", "url": "https://prod.cdn.publicnext.com/s3fs-public/421698-1756886497-05~1.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "ManjuVijayapura" }, "editor": { "@type": "Person", "name": "suman.k" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ವಿಜಯಪುರ : ಜಿಲ್ಲೆಗೆ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪಿಸಬೇಕು, ಪಿಪಿಪಿ (ಪಬ್ಲಿಕ್, ಪ್ರೈವೇಟ್, ಪಾರ್ಟ್‌ನರ್‌ಶಿಪ್) ಮಾದರಿಯಲ್ಲಿ ವೈದ್ಯಕೀಯ ...Read more" } ", "keywords": "Kalaghatagi,Galagihulakoppa village,animal menace,crop damage,worried farmer,local news,Karnataka,wildlife,human-animal conflict,agriculture", "url": "https://dashboard.publicnext.com/node" } ವಿಜಯಪುರ: ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಆಗ್ರಹಿಸಿ ಎಬಿವಿಪಿ ಪ್ರತಿಭಟನೆ – ಪೊಲೀಸ್ ವಶಕ್ಕೆ
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ವಿಜಯಪುರ: ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಆಗ್ರಹಿಸಿ ಎಬಿವಿಪಿ ಪ್ರತಿಭಟನೆ – ಪೊಲೀಸ್ ವಶಕ್ಕೆ

ವಿಜಯಪುರ : ಜಿಲ್ಲೆಗೆ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪಿಸಬೇಕು, ಪಿಪಿಪಿ (ಪಬ್ಲಿಕ್, ಪ್ರೈವೇಟ್, ಪಾರ್ಟ್‌ನರ್‌ಶಿಪ್) ಮಾದರಿಯಲ್ಲಿ ವೈದ್ಯಕೀಯ ಕಾಲೇಜನ್ನು ಕೈ ಬಿಡುವಂತೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು ಜಿಲ್ಲಾಧಿಕಾರಿಗಳ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.

ನಗರದ ಅಂಬೇಡ್ಕರ್ ವೃತ್ತದಲ್ಲಿ ಜಮಾಯಿಸಿದ ಕಾರ್ಯಕರ್ತರು “ಬೇಕೇ ಬೇಕು, ಸರಕಾರಿ ಮೆಡಿಕಲ್ ಕಾಲೇಜು ಬೇಕು” ಎಂದು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಜಿಲ್ಲಾಧಿಕಾರಿಗಳ ಕಚೇರಿಗೆ ಮುತ್ತಿಗೆ ಹಾಕಲು ಮುಂದಾದಾಗ, ಪೊಲೀಸರು ಅವರನ್ನು ತಡೆಯಲು ಪ್ರಯತ್ನಿಸಿದರು. ಈ ವೇಳೆ ಪೊಲೀಸರಿಗೂ, ಪ್ರತಿಭಟನಾಕಾರರಿಗೂ ನಡುವೆ ಮಾತಿನ ಚಕಮಕಿ ಸಂಭವಿಸಿತು.

ನಂತರ, ಪೊಲೀಸರು ಎಬಿವಿಪಿ ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ ಮತ್ತು ನಂತರ ಬಿಡುಗಡೆ ಮಾಡಲಾಗಿದೆ. ಈ ಸಂದರ್ಭದಲ್ಲಿ ಎಬಿವಿಪಿಯ ರಾಜ್ಯ ಕಾರ್ಯದರ್ಶಿ ಸಚಿನ್ ಕುಳಗೇರಿ, ಹರ್ಷ ನಾಯಕ ಮುಂತಾದವರು ಉಪಸ್ಥಿತರಿದ್ದರು.

Edited By : Suman K
Kshetra Samachara

Kshetra Samachara

03/09/2025 01:32 pm

Cinque Terre

10.98 K

Cinque Terre

0

ಸಂಬಂಧಿತ ಸುದ್ದಿ