ಶಿರಸಿ: ನಗರದಲ್ಲಿ ನೂತನವಾಗಿ ಆರಂಭಗೊಂಡ ಇಂದಿರಾ ಕ್ಯಾಂಟೀನ್ ಒಂದು ವಾರ ಕಾರ್ಯ ನಿರ್ವಹಿಸಿದ ಬಳಿಕ, ಅದರ ಸ್ಥಿತಿಗತಿ ಕುರಿತು ಸ್ವತಃ ಶಾಸಕ ಭೀಮಣ್ಣ ನಾಯ್ಕ ಅಧಿಕಾರಿಗಳೊಂದಿಗೆ ಕ್ಯಾಂಟೀನ್‌ಗೆ ಭೇಟಿ ನೀಡಿ ಊಟ ಮತ್ತು ಉಪಹಾರದ ಗುಣಮಟ್ಟವನ್ನು ಪರಿಶೀಲನೆ ಮಾಡಿದರು.
ಕ್ಯಾಂಟೀನ್‌ನಲ್ಲಿ ಸಾರ್ವಜನಿಕರ ನಡುವೆ ಸಾಮಾನ್ಯರಂತೆ ಊಟ ಸವಿದು ಕ್ವಾಲಿಟಿ ಪರಿಶೀಲನೆ ನಡೆಸಿದ ಅವರು, ಕ್ಯಾಂಟೀನ್‌ಗೆ ಆಗಮಿಸಿದ ಸಾರ್ವಜನಿಕರೊಂದಿಗೆ ಊಟದ ಗುಣಮಟ್ಟದ ಕುರಿತು ಚರ್ಚೆ ನಡೆಸಿದರು. ನಂತರ ಗುತ್ತಿಗೆದಾರರಿಗೆ ಊಟದ ಗುಣಮಟ್ಟವನ್ನು ಸದೃಢವಾಗಿ ಕಾಪಾಡುವಂತೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ನಗರಯೋಜನಾ ಪ್ರಾಧಿಕಾರದ ಅಧ್ಯಕ್ಷ ಜಗದೀಶ್ ಗೌಡ, ಎಸ್.ಕೆ. ಭಾಗ್ವತ, ದೀಪಕ್ ಹೆಗಡೆ ದೊಡ್ಡೂರು, ಗಣೇಶ ದಾವಣಗೆರೆ, ನಗರಸಭೆ ಪ್ರಭಾರಿ ಪೌರಾಯುಕ್ತರಾದ ಶಿವರಾಜ ಮತ್ತು ಸಂಬಂಧಿತ ಅಧಿಕಾರಿಗಳು ಉಪಸ್ಥಿತರಿದ್ದರು.
Kshetra Samachara
03/09/2025 02:56 pm