ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಯುವಕರು, ಗ್ರಾಮಸ್ಥರು ಗ್ರಂಥಾಲಯವನ್ನು ಸದ್ಬಳಕೆ ಮಾಡಿಕೊಳ್ಳಿ

ಗದಗ : ಗ್ರಾಮೀಣ ಪ್ರದೇಶದಲ್ಲಿ ಜ್ಞಾನ ಸಂಪಾದನೆಗೆ ಅತ್ಯಂತ ಸರಳ ಮತ್ತು ಸುಲಭವಾದ ಮಾರ್ಗಗಳನ್ನು ಗ್ರಂಥಾಲಯ ಒದಗಿಸುತ್ತದೆ. ಯುವಕರು, ಗ್ರಾಮಸ್ಥರು ಗ್ರಂಥಾಲಯವನ್ನು ಸದ್ಬಳಕೆ ಮಾಡಿಕೊಳ್ಳಬೇಕು’’ ಎಂದು ತಾಲೂಕ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳಾದ ಎಸ್.ಕೆ. ಇನಾಮದಾರ ಹೇಳಿದರು.

ತಾಲೂಕಿನ ಬೆನಕನಕೊಪ್ಪ ಗ್ರಾಮ ಪಂಚಾಯತಿ ವ್ಯಾಪ್ತಿಯ ಸಂಕದಾಳ ಗ್ರಾಮದಲ್ಲಿ ನೂತನ ಉಪ ಗ್ರಂಥಾಲಯವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಶಾಲೆಯಲ್ಲಿ ಗ್ರಂಥಾಲಯ ತೆರೆದಿರುವುದರಿಂದ ವಿದ್ಯಾರ್ಥಿಗಳಿಗೆ ತುಂಬಾ ಉಪಯುಕ್ತವಾಗಿದೆ. ವಿದ್ಯಾರ್ಥಿಗಳು ಪಠ್ಯದ ಜತೆ ಇತರೆ ಪುಸ್ತಕಗಳನ್ನು ಓದುವುದಕ್ಕೆ ಸಹಕಾರಿಯಾಗಿದೆ. ಜತೆಗೆ ದಿನಪತ್ರಿಕೆ, ಸ್ಪರ್ಧಾತ್ಮಕ ಪರೀಕ್ಷೆಗಳ ಬಗೆಗಿನ ಪುಸ್ತಕ ಓದುವ, ಓದಿದ್ದನ್ನು ಮನನ ಮಾಡಿಕೊಳ್ಳುವುದನ್ನು ರೂಢಿಸಿಕೊಂಡಲ್ಲಿ ಸಾಧನೆ ಮಾಡಬಹುದಾಗಿದೆ ಎಂದರು.

ಈ ಸಂದರ್ಭದಲ್ಲಿ ಗ್ರಾ.ಪಂ. ಅಧ್ಯಕ್ಷರಾದ ಶಾಂತವ್ವ ಕೊವಿ, ಉಪಾಧ್ಯಕ್ಷರಾದ ಪಾರ್ವತೆವ್ವ ಮಾದರ, ಸದಸ್ಯರಾದ ಸಿದ್ದಣ್ಣ ಅಂಗಡಿ, ಇದ್ದರು.

Edited By : PublicNext Desk
Kshetra Samachara

Kshetra Samachara

03/09/2025 05:42 pm

Cinque Terre

6.12 K

Cinque Terre

0

ಸಂಬಂಧಿತ ಸುದ್ದಿ