", "articleSection": "Infrastructure,Education,Government", "image": { "@type": "ImageObject", "url": "https://prod.cdn.publicnext.com/s3fs-public/229640-1756908415-shaly.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "PublicNext" }, "editor": { "@type": "Person", "name": "hdmanju" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಗುಂಡ್ಲುಪೇಟೆ : ಹನೂರು ಶೈಕ್ಷಣಿಕ ವಲಯದ ಕೂಡ್ಲೂರು ಕ್ಲಸ್ಟರ್ ವ್ಯಾಪ್ತಿಯ ಅಂಚಿಪಾಳ್ಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಕೊಠಡಿಯ ಮೇಲ್ಛಾವಣಿ ಸಂ...Read more" } ", "keywords": "chamarajanagar school roof damage, classroom ceiling collapse risk, students study in danger chamarajanagar, unsafe school building chamarajanagar, chamarajanagar education news, damaged classroom roof karnataka, children safety issue school, chamarajanagar infrastructure problem", "url": "https://dashboard.publicnext.com/node" } ಚಾಮರಾಜನಗರ : ಶಿಥಿಲಗೊಂಡ ಶಾಲಾ ಕೊಠಡಿ ಮೇಲ್ಛಾವಣಿ - ಜೀವಭಯದಲ್ಲಿ ಮಕ್ಕಳಿಗೆ ಪಾಠ!
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಾಮರಾಜನಗರ : ಶಿಥಿಲಗೊಂಡ ಶಾಲಾ ಕೊಠಡಿ ಮೇಲ್ಛಾವಣಿ - ಜೀವಭಯದಲ್ಲಿ ಮಕ್ಕಳಿಗೆ ಪಾಠ!

ಗುಂಡ್ಲುಪೇಟೆ : ಹನೂರು ಶೈಕ್ಷಣಿಕ ವಲಯದ ಕೂಡ್ಲೂರು ಕ್ಲಸ್ಟರ್ ವ್ಯಾಪ್ತಿಯ ಅಂಚಿಪಾಳ್ಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಕೊಠಡಿಯ ಮೇಲ್ಛಾವಣಿ ಸಂಪೂರ್ಣ ಶಿಥಿಲಗೊಂಡು ಸೋರುತ್ತಿದೆ. ಕಾಂಕ್ರೀಟ್ ಚಕ್ಕೆಗಳು ಕೆಳಗೆ ಬೀಳುತ್ತಿರುವುದರಿಂದ ವಿದ್ಯಾರ್ಥಿಗಳು ಜೀವಭಯದಲ್ಲಿ ವಿದ್ಯಾಬ್ಯಾಸ ಮಾಡುವಂತ ಪರಿಸ್ಥಿತಿ ಎದುರಾಗಿದೆ.

ಹನೂರಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಬಹುತೇಕ ಕೊಠಡಿಗಳು ಶಿಥಿಲಗೊಂಡಿದ್ದು, ವಿದ್ಯಾರ್ಥಿಗಳು ಮಳೆಗಾಲದಲ್ಲಿ ಆತಂಕದಲ್ಲಿಯೇ ಕುರುವಂತಾಗಿದೆ. ಪೋಷಕರು ಶಾಲೆಗಳಿಗೆ ಮೂಲಭೂತ ಸೌಲಭ್ಯ ಕಲ್ಪಿಸುವಂತೆ ಅನೇಕ ಬಾರಿ ಪ್ರತಿಭಟನೆ ಮಾಡಿದ್ರೂ ಯಾವುದೇ ಪ್ರಯೋಜನವಾಗಿಲ್ಲ, ಸಂಬಂಧಪಟ್ಟ ಅಧಿಕಾರಿಗಳು ಕ್ಯಾರೆ ಎನ್ನುತ್ತಿಲ್ಲ ಅಂತ ಆಕ್ರೋಶ ಹೊರಹಾಕಿದ್ದಾರೆ.

ಇನ್ನು ಕಳೆದ ತಿಂಗಳು, ಪೆದ್ದನ ಪಾಳ್ಯ ಗ್ರಾಮದ 62 ವಿದ್ಯಾರ್ಥಿಗಳನ್ನು ಶಾಲೆಗೆ ಕಳುಹಿಸದೆ 9 ದಿನಗಳ ಕಾಲ ಪ್ರತಿಭಟನೆ ನಡೆಸಲಾಗಿತ್ತು. ಕೂಡಲೇ ಅಗತ್ಯ ಸೌಲಭ್ಯಗಳನ್ನು ಒದಗಿಸುವಂತೆ ಪೋಷಕರು ಶಿಕ್ಷಣ ಇಲಾಖೆಗೆ ಮನವಿ ಮಾಡಿದ್ದಾರೆ.

Edited By : Manjunath H D
PublicNext

PublicNext

03/09/2025 07:36 pm

Cinque Terre

22.81 K

Cinque Terre

0

ಸಂಬಂಧಿತ ಸುದ್ದಿ