", "articleSection": "Politics,Crime,Law and Order", "image": { "@type": "ImageObject", "url": "https://prod.cdn.publicnext.com/s3fs-public/229640-1756917102-dvg2.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "AnnappaDavanagere" }, "editor": { "@type": "Person", "name": "hdmanju" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ದಾವಣಗೆರೆ: ಎಸ್. ಪಿ ಉಮಾ ಪ್ರಶಾಂತ್ ಅವರಿಗೆ ಅವಹೇಳನಕಾರಿ ಹೇಳಿಕೆ ನೀಡಿದ ಹರಿಹರ ಶಾಸಕ ಬಿ. ಪಿ. ಹರೀಶ್ ವಿರುದ್ಧ ದಾವಣಗೆರೆ ಕೆಟಿಜೆ ನಗರ ಪೊಲೀಸ...Read more" } ", "keywords": "sp uma prashanth derogatory remark, bp harish fir, bp harish controversy, karnataka mla bp harish news, derogatory statement case karnataka, sp uma prashanth insult, bp harish latest news, karnataka political controversy", "url": "https://dashboard.publicnext.com/node" } ಎಸ್. ಪಿ ಉಮಾ ಪ್ರಶಾಂತ್‌ಗೆ ಅವಹೇಳನಕಾರಿ ಹೇಳಿಕೆ : ಶಾಸಕ ಬಿ. ಪಿ. ಹರೀಶ್ ವಿರುದ್ಧ ಎಫ್‌ಐಆರ್‌
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಎಸ್. ಪಿ ಉಮಾ ಪ್ರಶಾಂತ್‌ಗೆ ಅವಹೇಳನಕಾರಿ ಹೇಳಿಕೆ : ಶಾಸಕ ಬಿ. ಪಿ. ಹರೀಶ್ ವಿರುದ್ಧ ಎಫ್‌ಐಆರ್‌

ದಾವಣಗೆರೆ: ಎಸ್. ಪಿ ಉಮಾ ಪ್ರಶಾಂತ್ ಅವರಿಗೆ ಅವಹೇಳನಕಾರಿ ಹೇಳಿಕೆ ನೀಡಿದ ಹರಿಹರ ಶಾಸಕ ಬಿ. ಪಿ. ಹರೀಶ್ ವಿರುದ್ಧ ದಾವಣಗೆರೆ ಕೆಟಿಜೆ ನಗರ ಪೊಲೀಸ್‌ ಠಾಣೆಯಲ್ಲಿ BNS u|s- 132,351(2),79) ಸೆಕ್ಷನ್ ಅಡಿ ಪ್ರಕರಣ ದಾಖಲಾಗಿದೆ.

ಶಾಸಕ ಬಿ. ಪಿ. ಹರೀಶ್ ಸುದ್ದಿಗೋಷ್ಠಿಯಲ್ಲಿ ಮಾತನಾಡುವ ವೇಳೆ ಎಸ್ಪಿಯವರನ್ನು ನಾಯಿಗೆ ಹೋಲಿಸಿ ಅವಹೇಳ ಮಾಡಿದ್ದರು. ಈ ಸಂಬಂಧ ಶಾಸಕರ ವಿರುದ್ದ ಸ್ವತಃ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್, ಕೆಟಿಜೆ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಎಸ್ಪಿ ಬಗ್ಗೆ ಶಾಸಕರು ಹೇಳಿದ್ದೇನು..?

ದಾವಣಗೆರೆ ಎಸ್ಪಿ ಉಮಾ ಪ್ರಶಾಂತ್, ಶಾಸಕರಿಗೆ ಬೆಲೆಯೇ ಕೊಡುವುದಿಲ್ಲ. ಶಾಸಕರು ಸಭೆಯಲ್ಲಿ ಇದ್ದರೆ ಮುಖ ತಿರುಗಿಸಿ ಕೂರುತ್ತಾರೆ. ಗಂಟೆಗಟ್ಟಲೆ ಶಾಮನೂರು ಮನೆಯ ಬಾಗಿಲು ಕಾಯುತ್ತಾರೆ. ಎಸ್ಪಿ ಶಾಮನೂರು ಕುಟುಂಬದ ಪೊಮೊರಿಯನ್ ನಾಯಿಯಂತೆ ವರ್ತಿಸುತ್ತಾರೆ. ಇವರಿಗೆ ಅಧಿಕಾರದಲ್ಲಿರುವವರು ಮಾತ್ರ ಮುಖ್ಯವಾಗಿ ಕಾಣುತ್ತಾರೆ ಎನ್ನಿಸುತ್ತದೆ.

ಎಲ್ಲಾ ಜನಪ್ರತಿನಿಧಿಗಳನ್ನು ಸಮಾನವಾಗಿ ಕಾಣುವ ದೃಷ್ಟಿಕೋನ ಇಲ್ಲ. ಈ ಅಧಿಕಾರ ತಾತ್ಕಾಲಿಕ ಅನ್ನುವುದನ್ನು ಎಸ್ಪಿ ಅರಿತುಕೊಳ್ಳಬೇಕು ಎಂದು ಟೀಕಿಸಿದ್ದರು.

Edited By : Manjunath H D
PublicNext

PublicNext

03/09/2025 10:01 pm

Cinque Terre

19.48 K

Cinque Terre

0

ಸಂಬಂಧಿತ ಸುದ್ದಿ