", "articleSection": "Politics", "image": { "@type": "ImageObject", "url": "https://prod.cdn.publicnext.com/s3fs-public/405356-1756950337-sid.png", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "AnnappaDavanagere" }, "editor": { "@type": "Person", "name": "Vinayak.Patil" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ದಾವಣಗೆರೆ : ಆಡಳಿತದ ಮೇಲೆ ಹಿಡಿತ ಕಳೆದುಕೊಂಡ ಮುಖ್ಯಮಂತ್ರಿ ಸಿದ್ದರಾಮಯ್ಯ, ದಿನಗಳನ್ನು ದೂಡುತ್ತಿದ್ದಾರೆ. ಕುರ್ಚಿ ಉಳಿಸಿಕೊಳ್ಳಲು ಬೇಜವಾಬ್ದಾರ...Read more" } ", "keywords": "CM loses grip on administration, MP Vishweshwar Hegde Kageri dissatisfaction, Karnataka politics, BJP leader criticism, state government issues, administrative problems, Kageri's statement, Karnataka news updates, government accountability.", "url": "https://dashboard.publicnext.com/node" }
ದಾವಣಗೆರೆ : ಆಡಳಿತದ ಮೇಲೆ ಹಿಡಿತ ಕಳೆದುಕೊಂಡ ಮುಖ್ಯಮಂತ್ರಿ ಸಿದ್ದರಾಮಯ್ಯ, ದಿನಗಳನ್ನು ದೂಡುತ್ತಿದ್ದಾರೆ. ಕುರ್ಚಿ ಉಳಿಸಿಕೊಳ್ಳಲು ಬೇಜವಾಬ್ದಾರಿ ಹೇಳಿಕೆ ನೀಡುತ್ತಿದ್ದಾರೆ' ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಆರೋಪಿಸಿದರು.
ನಗರದ ಪಿ.ಬಿ ರಸ್ತೆಯಲ್ಲಿರುವ ದೈವಜ್ಞ ಕಲ್ಯಾಣ ಮಂಟಪದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರದ ಆಡಳಿತದ ವೈಫಲ್ಯಗಳನ್ನು ಮುಚ್ಚಿಕೊಳ್ಳಲು ಕಾಂಗ್ರೆಸ್ ಸಾಲುಸಾಲು ವಿವಾದಗಳನ್ನು ಸೃಷ್ಟಿಸುತ್ತಿದೆ. ಈ ಮೂಲಕ ಜನರ ಗಮನವನ್ನು ಬೇರೆಡೆ ಸೆಳೆಯುವ ಪ್ರಯತ್ನ ಮಾಡುತ್ತಿದೆ ಎಂದರು.
'ರಾಜ್ಯದಲ್ಲಿ ಅಭಿವೃದ್ಧಿ ಕುಂಠಿತವಾಗಿದೆ. ಕಾಮಗಾರಿಗಳಿಗೆ ಅನುದಾನ ಬಿಡುಗಡೆಯಾಗುತ್ತಿಲ್ಲ. ಎಲ್ಲೆಡೆ ಭ್ರಷ್ಟಾಚಾರ ತುಂಬಿತುಳುಕುತ್ತಿದೆ. ಅತಿವೃಷ್ಟಿಯಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಅಸಮಾಧಾನ ಹೊರಹಾಕಿದರು.
'ಬಹುಸಂಖ್ಯಾತ ಹಿಂದೂಗಳ ಭಾವನೆಯನ್ನು ರಾಜ್ಯ ಸರ್ಕಾರ ಧಿಕ್ಕರಿಸಿದೆ. ಧರ್ಮಸ್ಥಳ, ದಸರಾ ಮಹೋತ್ಸವ ಹಾಗೂ ಚಾಮುಂಡಿ ಬೆಟ್ಟದ ವಿಚಾರದಲ್ಲಿ ಇದು ನಿರೂಪಿತವಾಗಿದೆ. ಸಾಮಾಜಿಕ ಸಾಮರಸ್ಯ ಕದಡುವ ಅಂತರರಾಷ್ಟ್ರೀಯ ಮಟ್ಟದ ಷಡ್ಯಂತ್ರದ ಭಾಗವಾಗಿ ಸರ್ಕಾರ ನಡೆದುಕೊಳ್ಳುತ್ತಿದೆ. ಸಮಾಜ ಒಡೆದರೆ ಡ್ರಗ್ಸ್ ಮಾಫಿಯಾಗೆ ಅನುಕೂಲವಾಗಲಿದೆ' ಎಂದರು.
'ಮುಖ್ಯಮಂತ್ರಿ ಸಿದ್ದರಾಮಯ್ಯ ಎಡಪಂಥೀಯ ಸಂಘಟನೆಗಳ ಕೈಗೊಂಬೆಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಧರ್ಮಸ್ಥಳ ವಿಚಾರದಲ್ಲಿ ಕೆಲ ಸಂಘಟನೆ ಹಾಗೂ ನಾಯಕರ ಒತ್ತಡಕ್ಕೆ ಮಣಿದು ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಿದ್ದಾರೆ. ಹಿಂದೂಗಳ ಪವಿತ್ರ ಕ್ಷೇತ್ರವಾದ ಧರ್ಮಸ್ಥಳದ ವಿರುದ್ಧ ಅಂತರರಾಷ್ಟ್ರೀಯ ಮಟ್ಟದಲ್ಲಿ ಟೂಲ್‌ಕಿಟ್ ರೂಪಿಸಲಾಗಿದೆ. ಹಿಂದೂಗಳ ವಿರುದ್ಧದ ಇಂತಹ ಷಡ್ಯಂತ್ರಗಳಿಗೆ ಫಲ ಸಿಗದು' ಎಂದು ಆಕ್ರೋಶ ವ್ಯಕ್ತಪಡಿಸಿದರು.
PublicNext
04/09/2025 07:15 am