", "articleSection": "Religion", "image": { "@type": "ImageObject", "url": "https://prod.cdn.publicnext.com/s3fs-public/38659820250904082019filescapture.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "KumarTumakur" }, "editor": { "@type": "Person", "name": "9844461373" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ತುಮಕೂರು: ತುಮಕೂರು ದಸರಾ ಸಮಿತಿಯ 35 ನೇ ದಸರಾ ಉತ್ಸವವನ್ನು ಈ ತಿಂಗಳ 22 ರಿಂದ ಹತ್ತು ದಿಗಳ ಕಾಲ ಹಿಂದಿನಂತೆ ಧಾರ್ಮಿಕ, ಸಾಂಸ್ಕೃತಿಕ ಹಾಗೂ ಸಾಂ...Read more" } ", "keywords": "Dasara, ", "url": "https://dashboard.publicnext.com/node" }
ತುಮಕೂರು: ತುಮಕೂರು ದಸರಾ ಸಮಿತಿಯ 35 ನೇ ದಸರಾ ಉತ್ಸವವನ್ನು ಈ ತಿಂಗಳ 22 ರಿಂದ ಹತ್ತು ದಿಗಳ ಕಾಲ ಹಿಂದಿನಂತೆ ಧಾರ್ಮಿಕ, ಸಾಂಸ್ಕೃತಿಕ ಹಾಗೂ ಸಾಂಪ್ರದಾಯಕವಾಗಿ ಆಚರಿಸಲು ಸಮಿತಿಯ ಪೂರ್ವಭಾವಿ ಸಭೆಯಲ್ಲಿ ತೀರ್ಮಾನಿಸಲಾಯಿತು.
ತುಮಕೂರು ದಸರಾ ಸಮಿತಿ ಅಧ್ಯಕ್ಷ ಬಿ.ಎಸ್.ಮಂಜುನಾಥ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ದಸರ ಮಹೋತ್ಸವದಲ್ಲಿ ಆಯೋಜಿಸುವ ಧಾರ್ಮಿಕ, ಸಾಂಸ್ಕೃತಿ ಕಾರ್ಯಕ್ರಮಗಳ ಕುರಿತು ಚರ್ಚಿಸಲಾಯಿತು. ವಿವಿಧ ಮಠಗಳ ಸ್ವಾಮೀಜಿಗಳು, ಚುನಾಯಿತ ಪ್ರತಿನಿಧಿಗಳು, ವಿವಿಧ ಕ್ಷೇತ್ರಗಳ ಸಾಧಕರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಲು ತೀರ್ಮಾನಿಸಲಾಯಿತು. ನಗರದ ಸರ್ಕಾರಿ ಪದವಿಪೂರ್ವ ಕಾಲೇಜು ಮೈದಾನದಲ್ಲಿ ದಸರಾ ಉತ್ಸವ ಕಾರ್ಯಕ್ರಮ ನಡೆಸುವಂತೆ ಮುಖಂಡರು ಅಭಿಪ್ರಾಯ ವ್ಯಕ್ತಪಡಿಸಿದರು.
ದಸರಾ ಉತ್ಸವ ಸಮಿತಿ ಅಧ್ಯಕ್ಷ ಡಾ.ಎಸ್.ಪರಮೇಶ್, ಕಾರ್ಯಾಧ್ಯಕ್ಷ ಡಾ.ಲಕ್ಷ್ಮೀಕಾಂತ್, ಗೌರವಾಧ್ಯಕ್ಷ ಎಸ್.ಪಿ.ಚಿದಾನಂದ್, ಮೆರವಣಿಗೆ ಸಮಿತಿ ಅಧ್ಯಕ್ಷ ಕೋರಿ ಮಂಜುನಾಥ್, ನಿಕಟಪೂರ್ವ ಅಧ್ಯಕ್ಷ ಆರ್.ಎಲ್.ರಮೇಶ್‌ಬಾಬು, ಪ್ರಧಾನ ಕಾರ್ಯದರ್ಶಿ ಹೆಚ್.ಎಸ್.ಮಹೇಶಣ್ಣ, ಖಜಾಂಚಿ ಜಿ.ಎಸ್.ಬಸವರಾಜು, ಸಂಯೋಜಕ ಕೆ.ಎನ್.ಗೋವಿಂದರಾಜು, ಕಾರ್ಯದರ್ಶಿ ಕೆ.ಶಂಕರ್ ಉಪ್ಪಾರಹಳ್ಳಿ, ಸಹ ಕಾರ್ಯದರ್ಶಿ ಕೆ.ಪರಶುರಾಮಯ್ಯ ಮತ್ತಿತರ ಮುಖಂಡರು ಸಭೆಯಲ್ಲಿ ಭಾಗವಹಿಸಿ ಚರ್ಚಿಸಿದರು.
ಈ ತಿಂಗಳ 22 ರಂದು ಬೆಳಿಗ್ಗೆ 8 ಗಂಟೆಗೆ ಗಣಪತಿ ಪೂಜೆ, ದುರ್ಗಾ ಹೋಮ, ಭೂಮಿ ಪೂಜೆಯೊಂದಿಗೆ ದಸರಾ ಕಾರ್ಯಕ್ರಮಗಳು ಚಾಲನೆಗೊಳ್ಳಲಿವೆ. 23 ರಂದು ಸಂಜೆ 6 ಗಂಟೆಗೆ ಸಾಂಸ್ಕೃತಿಕ ದಸರಾ ಕಾರ್ಯಕ್ರಮಗಳು ಉದ್ಘಾಟನೆಯಾಗಲಿವೆ. ಹತ್ತು ದಿನಗಳ ದಸರಾ ಮಹೋತ್ಸವದಲ್ಲಿ ರಂಗಗೀತೆ, ಜಾನಪದಗೀತೆ, ವೇಷಭೂಷಣ ಸ್ಪರ್ಧೆ, ಯೋಗ ಸಂಭ್ರಮ, ದೇಶಭಕ್ತಿ ಗೀತೆ, ಯೋಗ ನೃತ್ಯ, ರಂಗೋಲಿ ಸ್ಪರ್ಧೆ, ಸಾಂಸ್ಕೃತಿಕ ನೃತ್ಯ, ರಾಷ್ಟç ಭಕ್ತಿ ಕುರಿತ ಕಾರ್ಯಕ್ರಮ ಹಮ್ಮಿಕೊಳ್ಳಲು ತೀರ್ಮಾನಿಸಲಾಯಿತು. ಅಕ್ಟೋಬರ್ 2 ರಂದು ಶಮೀಪೂಜೆ ಮತ್ತಿತದ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ.
ನಾನಾ ಸಂಘಸಂಸ್ಥೆಗಳ ಪ್ರಮುಖರು, ವಿವಿಧ ಸಮಾಜಗಳ ಪ್ರಮುಖರು ಸಭೆಯಲ್ಲಿ ಭಾಗವಹಿಸಿದ್ದರು.
Kshetra Samachara
04/09/2025 08:20 am