ನವದೆಹಲಿ: ಸಾಮಾನ್ಯ ಜನರು ಬಳಸುವ ವಸ್ತುಗಳ ಮೇಲಿನ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ದರಗಳನ್ನು ಪರಿಷ್ಕರಿಸುವ ಮಹತ್ವದ ನಿರ್ಧಾರವನ್ನು ಜಿಎಸ್‌ಟಿ ಮಂಡಳಿ ಬುಧವಾರ ತೆಗೆದುಕೊಂಡಿದೆ.
ಯಾವೆಲ್ಲ ವಸ್ತುಗಳಿಗೆ ತೆರಿಗೆ ಇಲ್ಲ?
* ಯುಎಚ್ಟಿ ಮಿಲ್ಕ್, ಪ್ಯಾಕ್ ಮಾಡಿದ ಚೆನ್ನಾ, ಪನ್ನೀರ್, ಇಂಡಿಯನ್ ಬ್ರೆಡ್ಸ್, ರೋಟಿ, ಕಾಕ್ರಾ, ಚಪಾತಿ, ಪರೋಟ, ಪಿಜ್ಜಾ ಹಾಗೂ ಬ್ರೆಡ್ ಇವಗಳು ಈವರೆಗೆ ಶೇ 5 ರ ಜಿಎಸ್‌ಟಿ ಸ್ಲ್ಯಾಬ್ ಅಡಿ ಬರುತ್ತಿದ್ದವು. ಈ ವಸ್ತುಗಳಿಗೆ ತೆರಿಗೆಯಿಂದ ವಿನಾಯಿತಿ ನೀಡಲಾಗಿದೆ.
* ಆಹಾರ ವಸ್ತುಗಳು ಮಾತ್ರವಲ್ಲದೆ, ಮಕ್ಕಳ ಕಲಿಕಾಸಾಮಗ್ರಿಗಳ ಮೇವಿನ ಜಿಎಸ್‌ಟಿಯನ್ನೂ ಸಂಪೂರ್ಣವಾಗಿ ತೆಗೆದುಹಾಕಲಾಗಿದೆ. ಮ್ಯಾಪ್ಸ್, ಚಾರ್ಟ್ಸ್ ಮತ್ತು ಗ್ಲೋಬ್ಸ್, ಪೆನ್ಸಿಲ್ಸ್, ಶಾರ್ಪರ್ನರ್ಸ್, ಎರೇಸರ್, ಕ್ರಯನ್ಸ್, ಮತ್ತು ಪ್ಯಾಸ್ಟೆಲ್‌ಗಳು, ಎಕ್ಸರ್‌ಸೈಸ್ ಬುಕ್ಸ್ ಮತ್ತು ನೋಟ್ ಪುಸ್ತಕಗಳು ಇವುಗಳ ಮೇಲೆ ಮೊದಲು ಶೇ 12ರಷ್ಟು ಜಿಎಸ್‌ಟಿ ವಿಧಿಸಲಾಗುತ್ತಿತ್ತು. ಇದನ್ನು ಸಂಪೂರ್ಣ ತೆರವು ಮಾಡಲಾಗಿದ್ದು, ಇನ್ಮುಂದೆ ಶೂನ್ಯ ತೆರಿಗೆ ವ್ಯಾಪ್ತಿಗೆ ಬರಲಿವೆ.
* ವೈಯಕ್ತಿಕ ವಿಮೆ ಮತ್ತು ಆರೋಗ್ಯ ವಿಮೆ ಮೇಲಿನ ಶೇ 18ರ ಜಿಎಸ್‌ಟಿಯನ್ನು ಶೂನ್ಯಕ್ಕೆ ಇಳಿಕೆ ಮಾಡಲಾಗಿದೆ. ವೈಯಕ್ತಿಕ ಜೀವವಿಮೆ ಮತ್ತು ಆರೋಗ್ಯ ವಿಮೆಗೆ ಕೇಂದ್ರಸರ್ಕಾರ ಬಹುದೊಡ್ಡ ರಿಯಾಯಿತಿ ನೀಡಿದೆ.
PublicNext
04/09/2025 01:44 pm