ಚಿಕ್ಕಮಗಳೂರು: ಗಣೇಶೋತ್ಸವ ಸಂಭ್ರಮ ಎಲ್ಲೆಡೆ ಮನೆ ಮಾಡಿದ್ದು ನಗರದ ವಿವಿಧಡೆ ಪ್ರತಿಷ್ಠಾಪಿಸಲಾಗಿರುವ ಗಣೇಶ ಮೂರ್ತಿಗಳನ್ನು ಅದ್ದೂರಿಯಾಗಿ ವಿಸರ್ಜನೆ ಮಾಡಲಾಗುತ್ತಿದೆ. ನಗರದ ಕೆಎಸ್ಆರ್‌ಟಿಸಿ ಡಿಪೋದಲ್ಲಿ ಪ್ರತಿಷ್ಠಾಪಿಸಿದ್ದ ಗಣೇಶನನ್ನು ವಿಶೇಷವಾಗಿ ಅಲಂಕರಿಸಿದ ಕೆಎಸ್‌ಆರ್‌ಟಿಸಿ ಬಸ್ ನಲ್ಲೇ ಮೆರವಣಿಗೆ ನಡೆಸಿ ಕೋಟೆ ಕೆರೆಯ ಕಲ್ಯಾಣಿಯಲ್ಲಿ ವಿಸರ್ಜಿಸಲಾಯಿತು. ಬಸ್ಸಿಗೆ ಹೂವಿನಿಂದ ಅಲಂಕರಿಸಿದ್ದು ನೋಡುಗರ ಗಮನ ಸೆಳೆಯಿತು ಮೆರವಣಿಗೆಯಲ್ಲಿ ನೂರಾರು ಕೆಎಸ್ಆರ್‌ಟಿಸಿ ಸಿಬ್ಬಂದಿಗಳು ಭಾಗಿಯಾದರು.
Kshetra Samachara
04/09/2025 07:26 pm