", "articleSection": "Politics,Infrastructure,Government", "image": { "@type": "ImageObject", "url": "https://prod.cdn.publicnext.com/s3fs-public/229640-1756996030-nanj.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "SugandaRajuNajangud" }, "editor": { "@type": "Person", "name": "hdmanju" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ನಂಜನಗೂಡು: ಸಾರ್ವಜನಿಕರಿಗೆ ಅನುಕೂಲವಾಗುವ ರೀತಿಯಲ್ಲಿ ರೈಲ್ವೆ ಮೇಲ್ಸೇತುವೆ ನಿರ್ಮಾಣ ಮಾಡಲಾಗುತ್ತದೆ ಎಂದು ನಂಜನಗೂಡಿನಲ್ಲಿ ಕೇಂದ್ರ ರೈಲ್ವೆ ಸಚ...Read more" } ", "keywords": "nanjangudu railway flyover, nanjangudu flyover construction, railway bridge nanjangudu, minister v somanna nanjangudu, nanjangudu infrastructure development, nanjangudu railway bridge project, nanjangudu flyover for public, nanjangudu road connectivity, nanjangudu transport facility, nanjangudu latest news", "url": "https://dashboard.publicnext.com/node" }
ನಂಜನಗೂಡು: ಸಾರ್ವಜನಿಕರಿಗೆ ಅನುಕೂಲವಾಗುವ ರೀತಿಯಲ್ಲಿ ರೈಲ್ವೆ ಮೇಲ್ಸೇತುವೆ ನಿರ್ಮಾಣ ಮಾಡಲಾಗುತ್ತದೆ ಎಂದು ನಂಜನಗೂಡಿನಲ್ಲಿ ಕೇಂದ್ರ ರೈಲ್ವೆ ಸಚಿವ ವಿ. ಸೋಮಣ್ಣ ಹೇಳಿದರು.
ನಂಜನಗೂಡು ನಗರದ ರಾಷ್ಟ್ರಪತಿ ರಸ್ತೆಯಲ್ಲಿ ರೈಲ್ವೆ ಮೇಲ್ಸೇತುವೆ ನಿರ್ಮಾಣ ಕಾಮಗಾರಿಯ ಸ್ಥಳ ಪರಿಶೀಲನೆ ನಡೆಸಿದ ಸಚಿವ ವಿ. ಸೋಮಣ್ಣ ಮಾತನಾಡಿದರು. ಭಾರತ ಸರ್ಕಾರ ಮಾಡಿದೆ. ರಾಜ್ಯದಲ್ಲಿ ಸಾಕಷ್ಟು ರೈಲ್ವೆ ನಿಲ್ದಾಣಗಳಿಗೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದೇನೆ. 180 ಎಲ್‍ಸಿ ಗಳು ಬಂದಿವೆ.
75 ಎಲ್ ಸಿ ಗಳಿಗೆ ಅಭಿವೃದ್ಧಿಪಡಿಸಲು ಮುಂದಾಗಿದ್ದೇವೆ. 25 ವರ್ಷಗಳಿಂದ ತುಂಬ ಸಮಸ್ಯೆ ಆಗಿದೆ. ದೇಶದಲ್ಲಿ ಸಾಕಷ್ಟು ರೈಲ್ವೆ ನಿಲ್ದಾಣಗಳಿಗೆ ಭೇಟಿ ನೀಡಿ ಸಮಸ್ಯೆಯನ್ನು ಆಲಿಸಿದ್ದೇನೆ. ತುಮಕೂರು ಲೋಕಸಭಾ ಕ್ಷೇತ್ರದಲ್ಲೂ ಭೇಟಿ ನೀಡಿದ್ದೇನೆ. ಹಾಗೆ ನಂಜನಗೂಡಿಗೆ ಇಂದು ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದ್ದೇನೆ. ನಂಜನಗೂಡು ವೇಗವಾಗಿ ಬೆಳೆಯುತ್ತಿದೆ. ಕೊಂಕಣ ಸುತ್ತಿ ಮೈಲಾರಕ್ಕೆ ಬರುವುದು ಬೇಡ. ಈಗಾಗಲೇ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಇನ್ನೆರಡು ತಿಂಗಳ ಒಳಗಾಗಿ ಕಾಮಗಾರಿಯನ್ನು ಪ್ರಾರಂಭಿಸುತ್ತೇವೆ. 2026 ರ ಒಳಗೆ ಕಾಮಗಾರಿ ಮುಗಿಸುತ್ತೇವೆ.
ಮೇಲ್ಸೇತುವೆ ಮಾಡುವಾಗ ಏನು ಮಾಡಬೇಕು ಎಂಬುದು ನನಗೆ ಗೊತ್ತಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಅನುದಾನವನ್ನು ನೀಡಿದ್ದಾರೆ ಆ ಪ್ರದೇಶದ ಜನರಿಗೆ ತಲುಪಬೇಕು ಎಂಬುದು ನಮ್ಮ ಉದ್ದೇಶವಾಗಿದೆ. ಜನರನ್ನು ಯಾಕೆ ಕರೆದುಕೊಂಡು ಬಂದಿದ್ದೀರಿ ಅಂತ ನನಗೆ ಗೊತ್ತಿಲ್ಲ. ರೈಲ್ವೆ ಮೇಲ್ಸೇತುವೆಯನ್ನು ನೇರವಾಗಿ ಮಾಡಲು ಕ್ರಮ ಕೈಗೊಳ್ಳಲಾಗುವುದು. ಸಾರ್ವಜನಿಕರಿಗೆ ಅನುಕೂಲವಾಗುವಂತೆ ರೈಲ್ವೆ ಮೇಲ್ ಸೇತುವೆ ನಿರ್ಮಾಣಕ್ಕೆ ಸಿದ್ಧತೆ ಮಾಡಿಕೊಂಡಿದ್ದೇವೆ ಎಂದರು.
ಈ ಸಂದರ್ಭದಲ್ಲಿ ಶಾಸಕರಾದ ದರ್ಶನ್ ಧ್ರುವನಾರಾಯಣ್, ಶ್ರೀವತ್ಸ, ಮಾಜಿ ಶಾಸಕರಾದ ಬಿ. ಹರ್ಷವರ್ಧನ್, ಕಳಲೆ ಕೇಶವಮೂರ್ತಿ, ಬಿಜೆಪಿ ಜಿಲ್ಲಾ ಅಧ್ಯಕ್ಷ ಕುಂಬ್ರಹಳ್ಳಿ ಸುಬ್ಬಣ್ಣ ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರು ಹಾಜರಿದ್ದರು.
PublicNext
04/09/2025 07:57 pm