", "articleSection": "Government", "image": { "@type": "ImageObject", "url": "https://prod.cdn.publicnext.com/s3fs-public/38659820250905081832filescapture.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "KumarTumakur" }, "editor": { "@type": "Person", "name": "9844461373" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ತುಮಕೂರು: ನಗರದ ಹೊರವಲಯದಲ್ಲಿರುವ ವಸಂತನರಸಾಪುರ ಕೈಗಾರಿಕಾ ಪ್ರದೇಶದಲ್ಲಿ 3 ನೇ ಹಂತದಲ್ಲಿ ಕೈಗೊಂಡಿರುವ 30 ಎಂಎಲ್‌ಡಿ ಸಾಮರ್ಥ್ಯದ ತೃತೀಯ ಹಂತದ ...Read more" } ", "keywords": "Water, Cleaning, Unit, ", "url": "https://dashboard.publicnext.com/node" }
ತುಮಕೂರು: ನಗರದ ಹೊರವಲಯದಲ್ಲಿರುವ ವಸಂತನರಸಾಪುರ ಕೈಗಾರಿಕಾ ಪ್ರದೇಶದಲ್ಲಿ 3 ನೇ ಹಂತದಲ್ಲಿ ಕೈಗೊಂಡಿರುವ 30 ಎಂಎಲ್‌ಡಿ ಸಾಮರ್ಥ್ಯದ ತೃತೀಯ ಹಂತದ ಕೊಳಚೆ ನೀರು ಶುದ್ಧೀಕರಣ ಘಟಕದ ಕಾಮಗಾರಿ ಸ್ಥಳಕ್ಕೆ ಗುರುವಾರ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಪರಿಶೀಲನೆ ನಡೆಸಿ ಮಾತನಾಡಿದ ಅವರು, ಕಾಮಗಾರಿ ಉತ್ತಮ ಗುಣಮಟ್ಟದಿಂದ ಕೂಡಿರಬೇಕು. ನಿಗದಿತ ಅವಧಿಯೊಳಗೆ ಕಾಮಗಾರಿಯನ್ನು ಪೂರ್ಣಗೊಳಿಸಬೇಕು ಎಂದು ಸಂಬಂಧಿತ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಘಟಕದಲ್ಲಿ ಈಗಾಗಲೇ ನೀರನ್ನು ಪಂಪು ಮಾಡಲು ಸಿದ್ಧತೆ ಕೈಗೊಳ್ಳಲಾಗಿದ್ದು, ಘಟಕಕ್ಕೆ ಇನ್ನೂ ವಿದ್ಯುತ್ ಸಂಪರ್ಕ ಕಲ್ಪಿಸಿಲ್ಲ. ಶೀಘ್ರದಲ್ಲೇ ವಿದ್ಯುತ್ ಸಂಪರ್ಕ ಕಲ್ಪಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಭೀಮಸಂದ್ರ ಕೆರೆಯಿಂದ ಸುಮಾರು 21 ಕಿಲೋ ಮೀಟರ್ ಪೈಪ್‌ಲೈನ್ ಮುಖಾಂತರ ಘಟಕಕ್ಕೆ ಕೊಳಚೆ ನೀರನ್ನು ತಲುಪಿಸಲಾಗುತ್ತಿದ್ದು, ತೃತೀಯ ಹಂತದಲ್ಲಿ ಶುದ್ಧೀಕರಣ ಮಾಡಿದ ಬಳಿಕ, ನೀರನ್ನು ವಸಂತನರಸಾಪುರ ಕೈಗಾರಿಕಾ ಪ್ರದೇಶ, ಸಿಬಿಕ್ ಮತ್ತು ಶಿರಾ ಕೈಗಾರಿಕಾ ಪ್ರದೇಶಗಳಿಗೆ ಸರಬರಾಜು ಮಾಡಲಾಗುವುದು ಎಂದು ತಿಳಿಸಿದರಲ್ಲದೆ, ಕೊಳಚೆ ನೀರನ್ನು ಶುದ್ಧೀಕರಿಸಿ ಪುನರ್ವಿನಿಯೋಗ ಮಾಡುವ ಕ್ರಮ ಪರಿಸರ ಸ್ನೇಹಿಯಾಗಲಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.
Kshetra Samachara
05/09/2025 08:18 am