", "articleSection": "Law and Order,Government", "image": { "@type": "ImageObject", "url": "https://prod.cdn.publicnext.com/s3fs-public/38659820250905083041filescapture.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "KumarTumakur" }, "editor": { "@type": "Person", "name": "9844461373" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ತುಮಕೂರು: ಸಾರ್ವಜನಿಕ ಉಪಯುಕ್ತ ಸೇವೆಗಳಿಗೆ ಸಂಬಂಧಿಸಿದಂತೆ ನಾಗರಿಕರಿಗೆ ಸುಲಭ ಹಾಗೂ ಶೀಘ್ರವಾಗಿ ಕಡಿಮೆ ವೆಚ್ಚದಲ್ಲಿ ನ್ಯಾಯ ದೊರೆಯುವಂತೆ ಮಾಡ...Read more" } ", "keywords": "Node", "url": "https://dashboard.publicnext.com/node" }
ತುಮಕೂರು: ಸಾರ್ವಜನಿಕ ಉಪಯುಕ್ತ ಸೇವೆಗಳಿಗೆ ಸಂಬಂಧಿಸಿದಂತೆ ನಾಗರಿಕರಿಗೆ ಸುಲಭ ಹಾಗೂ ಶೀಘ್ರವಾಗಿ ಕಡಿಮೆ ವೆಚ್ಚದಲ್ಲಿ ನ್ಯಾಯ ದೊರೆಯುವಂತೆ ಮಾಡಲು ಖಾಯಂ ಜನತಾ ಲೋಕ್ ಅದಾಲತ್ ಪೀಠವನ್ನು ಸ್ಥಾಪಿಸಲಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನೂರುನ್ನೀಸ ಹೇಳಿದರು.
ಜಿಲ್ಲಾ ನ್ಯಾಯಾಲಯದ ವಿಡಿಯೋ ಸಂವಾದ ಸಭಾಂಗಣದಲ್ಲಿ ಪತ್ರಿಕಾ ಗೋಷ್ಠಿ ನಡೆಸಿ ಮಾತನಾಡಿದ ಅವರು, 1987 ರ ಕಾನೂನು ಸೇವೆಗಳ ಪ್ರಾಧಿಕಾರ ಕಾಯ್ದೆಯನ್ನು 2002 ರಲ್ಲಿ ತಿದ್ದುಪಡಿ ಮಾಡಿದ ಬಳಿಕ, ಕರ್ನಾಟಕ ಸರ್ಕಾರವು 2007 ರಲ್ಲಿ ಬೆಂಗಳೂರು, ಬೆಳಗಾವಿ, ಧಾರವಾಡ, ಮೈಸೂರು, ಮಂಗಳೂರು ಮತ್ತು ಕಲಬುರ್ಗಿ ಜಿಲ್ಲೆಗಳಲ್ಲಿ ಖಾಯಂ ಜನತಾ ನ್ಯಾಯಾಲಯಗಳನ್ನು ಪ್ರಾರಂಭಿಸಿದ್ದು, ಪ್ರಸ್ತುತ ಜಿಲ್ಲಾ ನ್ಯಾಯಾಲಯದಲ್ಲಿಯೂ ಅವಕಾಶ ಮಾಡಿಕೊಟ್ಟಿದೆ ಎಂದು ತಿಳಿಸಿದರು.
ಸಾರ್ವಜನಿಕ ಉಪಯುಕ್ತ ಸೇವೆಗಳ ಸಂಬಂಧ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಭೂ ಸಾರಿಗೆ, ಜಲ ಸಾರಿಗೆ ಹಾಗೂ ವಾಯು ಸಾರಿಗೆ ಸೇವೆ, ಅಂಚೆ, ತಂತಿ, ದೂರದಾಣಿ, ವಿದ್ಯುತ್/ ನೀರು ಸರಬರಾಜು, ವಿಮೆ, ನೈರ್ಮಲ್ಯ ಹಾಗೂ ಚರಂಡಿ ವ್ಯವಸ್ಥೆ, ಆಸ್ಪತ್ರೆ ಹಾಗೂ ಔಷಧ ಸೇವೆ, ಬ್ಯಾಂಕುಗಳು, ಹಣಕಾಸು ಸಂಸ್ಥೆಗಳು, ಶಿಕ್ಷಣ ಸಂಸ್ಥೆ, ಗೃಹ ಹಾಗೂ ರಿಯಲ್ ಎಸ್ಟೇಟ್ ಸೇವೆ, ಎಲ್.ಪಿ.ಜಿ ಪೂರೈಕೆಯಂತಹ ಸೇವೆಗಳನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸಾರ್ವಜನಿಕ ಉಪಯುಕ್ತ ಸೇವೆಗಳೆಂದು ಘೋಷಣೆ ಮಾಡಿದ ಎಲ್ಲಾ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಪರಿಹರಿಸಲು ಪ್ರಯತ್ನಿಸಲಾಗುವುದು. ಒಂದು ವೇಳೆ ಉಭಯ ಪಕ್ಷಗಾರರು ರಾಜಿ ಸಂಧಾನಕ್ಕೆ ಒಪ್ಪದೇ ಇದ್ದರೆ ಪ್ರಕರಣವನ್ನು ವಿಚಾರಣೆ ಮಾಡಿ ಕಾನೂನು ಆಧಾರದ ಮೇಲೆ ತ್ವರಿತವಾಗಿ ತೀರ್ಪು ನೀಡಲಾಗುವುದು ಎಂದು ತಿಳಿಸಿದರು.
ಖಾಯಂ ಜನತಾ ಲೋಕ್ ಅದಾಲತ್ ನ್ಯಾಯಾಲಯದಲ್ಲಿ ಹಣಕಾಸು ಹಾಗೂ ಬ್ಯಾಂಕ್ ಪ್ರಕರಣಗಳಿಗೆ ಸಂಬಂಧಿಸಿದಂತೆ 1 ಕೋಟಿ ರೂ. ಮೌಲ್ಯದೊಳಗಿರುವ ಪ್ರಕರಣಗಳನ್ನು ದಾಖಲು ಮಾಡಲು ಅವಕಾಶವಿದ್ದು, ಯಾವುದೇ ನ್ಯಾಯಾಲಯ ಶುಲ್ಕವಿರುವುದಿಲ್ಲ. ಅರ್ಜಿದಾರರು ವಕೀಲರ ಮೂಲಕ ಅಥವಾ ನೇರವಾಗಿ ಅರ್ಜಿ ಸಲ್ಲಿಸಬಹುದು ಎಂದು ತಿಳಿಸಿದರಲ್ಲದೆ, ಲೋಕ್ ಅದಾಲತ್‌ನಲ್ಲಿ ತೀರ್ಮಾನವಾದ ಪ್ರಕರಣಗಳು ಅಂತಿಮವಾಗಿರುತ್ತವೆ. ಅವುಗಳ ವಿರುದ್ಧವಾಗಿ ಅಪೀಲು ಹೋಗಲು ಅವಕಾಶವಿಲ್ಲ (ಎರಡೂ ಪಕ್ಷಗಳು ಒಪ್ಪಿಕೊಂಡಿರುವುದರಿಂದ) ಎಂದು ತಿಳಿಸಿದರು.
ಸಾರ್ವಜನಿಕರಿಗೆ ಹೆಚ್ಚು ಲಾಭದಾಯಕವಾಗಿರುವ ಸಾರ್ವಜನಿಕ ಉಪಯುಕ್ತ ಸೇವೆಗಳಿಗೆ ನ್ಯಾಯ ದೊರಕಿಸುವ ವ್ಯವಸ್ಥೆಯನ್ನು ಜನರ ಮನೆ ಬಾಗಿಲಿಗೆ ತರುವ ಉದ್ದೇಶ ಹೊಂದಲಾಗಿದೆ. ನ್ಯಾಯವನ್ನು ಜನಸಾಮಾನ್ಯರಿಗೆ ಮುಟ್ಟಿಸುವಲ್ಲಿ ಈ ವ್ಯವಸ್ಥೆ ಮಹತ್ವದ ಪಾತ್ರ ವಹಿಸಲಿದೆ ಎಂದು ಹೇಳಿದರು.
Kshetra Samachara
05/09/2025 08:30 am