", "articleSection": "Politics,Government", "image": { "@type": "ImageObject", "url": "https://prod.cdn.publicnext.com/s3fs-public/222042-1757054217-Canva---2025-09-04T114932.107.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "KarthikUdupi" }, "editor": { "@type": "Person", "name": "Vijay.Kumar" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": " ಉಡುಪಿ: ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಅವರು, ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಕೈಗೊಳ್ಳಲಾಗಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ...Read more" } ", "keywords": "Backward Classes survey, Udupi district, socio-economic survey, Karnataka government initiatives, caste-based survey, economically weaker sections, socially backward classes, survey methodology, data collection, government policies, reservation policies, Karnataka news, Udupi news, socio-economic development. ", "url": "https://dashboard.publicnext.com/node" } ಉಡುಪಿ: ರಾಜ್ಯ ಹಿಂದುಳಿದ ವರ್ಗಗಳ ಸಮೀಕ್ಷೆ - ಜಿಲ್ಲೆಯಲ್ಲಿ 3.19 ಲಕ್ಷ ಕುಟುಂಬಗಳ ಗುರಿ
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ರಾಜ್ಯ ಹಿಂದುಳಿದ ವರ್ಗಗಳ ಸಮೀಕ್ಷೆ - ಜಿಲ್ಲೆಯಲ್ಲಿ 3.19 ಲಕ್ಷ ಕುಟುಂಬಗಳ ಗುರಿ

ಉಡುಪಿ: ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಅವರು, ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಕೈಗೊಳ್ಳಲಾಗಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಯಶಸ್ವಿಗೊಳಿಸಲು ಅಗತ್ಯ ಸಿದ್ಧತೆಗಳನ್ನು ವ್ಯವಸ್ಥಿತವಾಗಿ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಮಣಿಪಾಲದ ಜಿಲ್ಲಾಧಿಕಾರಿ ಸಂಕೀರ್ಣದಲ್ಲಿ ವೀಡಿಯೋ ಕಾನ್ಫರೆನ್ಸ್ ಮೂಲಕ ನಡೆದ ಸಭೆಯಲ್ಲಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಒಟ್ಟು 3.19 ಲಕ್ಷ ಕುಟುಂಬಗಳಿದ್ದು, ಯಾವುದೇ ಕುಟುಂಬ ಸಮೀಕ್ಷೆಯಿಂದ ಹೊರಗುಳಿಯದಂತೆ ಎಚ್ಚರ ವಹಿಸಬೇಕೆಂದು ಅವರು ತಿಳಿಸಿದರು. ಎಲ್ಲಾ ಮನೆಗಳಿಗೆ ವಿದ್ಯುತ್ ಸಂಪರ್ಕ ಇರುವುದರಿಂದ ಆರ್.ಆರ್ ಮೀಟರ್ ಆಧಾರವಾಗಿ ಮನೆಗಳನ್ನು ಗುರುತಿಸಿ ಜಿಯೋ ಟ್ಯಾಗಿಂಗ್ ಮಾಡುವುದರಿಂದ ಯಾವುದೇ ಮನೆ ತಪ್ಪಿಹೋಗುವುದಿಲ್ಲ. ಸೆಪ್ಟೆಂಬರ್ 10ರೊಳಗೆ ಮೆಸ್ಕಾಂ ಇಲಾಖೆ ಜಿಯೋ ಟ್ಯಾಗಿಂಗ್ ಕಾರ್ಯವನ್ನು ಪೂರ್ಣಗೊಳಿಸಬೇಕು ಎಂದು ಸೂಚನೆ ನೀಡಲಾಯಿತು. ಅನಧಿಕೃತ ಕಟ್ಟಡಗಳು ಸೇರಿದಂತೆ ಆರ್.ಆರ್ ನಂಬರ್ ಇಲ್ಲದ ಮನೆಗಳಿಗೂ ಪ್ರತ್ಯೇಕ ಪಟ್ಟಿ ತಯಾರಿಸಿ, ಜಿಯೋ ಟ್ಯಾಗಿಂಗ್ ಮಾಡಬೇಕೆಂದು ಹೇಳಿದರು.

ಸಮೀಕ್ಷೆ ಕಾರ್ಯವು ಸೆಪ್ಟೆಂಬರ್ 22ರಿಂದ ಆರಂಭಗೊಂಡು ಅಕ್ಟೋಬರ್ 7ರೊಳಗೆ ಪೂರ್ಣಗೊಳ್ಳಲಿದೆ. ಈ ಕಾರ್ಯವನ್ನು ಶಾಲಾ ಶಿಕ್ಷಕರು ಕೈಗೊಳ್ಳಲಿದ್ದು, ವಿಶೇಷ ಆಪ್ ಮೂಲಕ ಸಮೀಕ್ಷೆ ನಡೆಸಲಾಗುತ್ತದೆ. ಪ್ರತಿ ಸಮೀಕ್ಷೆದಾರರು ಕನಿಷ್ಟ 80 ರಿಂದ 100 ಮನೆಗಳಿಗೆ ಭೇಟಿ ನೀಡಿ ಸಮೀಕ್ಷೆ ಮಾಡಬೇಕಾಗುತ್ತದೆ. ರಾಜ್ಯ ಮಟ್ಟದ ಮಾಸ್ಟರ್ ಟ್ರೈನರ್ಸ್ ತರಬೇತಿ ಸೆಪ್ಟೆಂಬರ್ 8ರಂದು ನಡೆಯಲಿದ್ದು, ಜಿಲ್ಲಾ ಮಟ್ಟದಲ್ಲಿ ಸೆಪ್ಟೆಂಬರ್ 9 ರಿಂದ 11ರವರೆಗೆ ತರಬೇತಿ ನೀಡಲಾಗುತ್ತದೆ.

ಸರ್ಕಾರದ ಮಾರ್ಗಸೂಚಿ ಹಾಗೂ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಜಿಲ್ಲಾಧಿಕಾರಿ ಹೇಳಿದರು. ಎನ್.ಎಸ್.ಎಸ್ ವಿದ್ಯಾರ್ಥಿಗಳನ್ನು ಬಳಸಿಕೊಂಡು ಸಮೀಕ್ಷೆ ಕುರಿತಂತೆ ವ್ಯಾಪಕ ಪ್ರಚಾರ ಮಾಡಬೇಕೆಂದು ಸೂಚನೆ ನೀಡಲಾಯಿತು. ಪ್ರತಿ ತಾಲೂಕಿಗೆ ನೋಡೆಲ್ ಅಧಿಕಾರಿಗಳನ್ನು ನೇಮಿಸಿ ಸಮೀಕ್ಷಾ ಕಾರ್ಯಗಳ ಮೇಲ್ವಿಚಾರಣೆ ಮಾಡಲು ವ್ಯವಸ್ಥೆ ಮಾಡಲಾಗಿದೆ.

Edited By : Vijay Kumar
Kshetra Samachara

Kshetra Samachara

05/09/2025 12:07 pm

Cinque Terre

2.59 K

Cinque Terre

0

ಸಂಬಂಧಿತ ಸುದ್ದಿ