ಗೌರಿಬಿದನೂರು: ಲಾರಿ ಹಾಗೂ ದ್ವಿಚಕ್ರ ವಾಹನಗಳ ನಡುವೆ ಭೀಕರ ಅಪಘಾತ ಉಂಟಾದ ಪರಿಣಾಮ ಓರ್ವ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿರುವ ಘಟಣೆ ಗೌರಿಬಿದನೂರು ತಾಲ್ಲೂಕಿನ ಪುಲಗಾನಹಳ್ಳಿಯ ಬಳಿ ನಡೆದಿದೆ.
ಗೌರಿಬಿದನೂರು ತಾಲ್ಲೂಕಿನ ತರಿದಾಳು ಗ್ರಾಮದ ವ್ಯಕ್ತಿ 44 ವರ್ಷ ವಯಸ್ಸಿನ ರೈತ ಜಗದೀಶ್ ಎಂಬಾತ ಸಾವನ್ನಪ್ಪಿದ್ದಾನೆ.
ತಮ್ಮ ಜಮೀನಿನಲ್ಲಿ ಬೆಳೆದಿದ್ದ ಹೂ ಮಾರ್ಕೆಟ್‌ಗೆ ಹಾಕಿ ಮನೆಗೆ ಹಿಂತಿರುವಾಗ ಲಾರಿ ಹಾಗೂ ದ್ವಿಚಕ್ರ ವಾಹನಗಳು ನಡುವೆ ಆಕ್ಸಿಡೆಂಟ್ ಆಗಿದೆ. ವೇಗವಾಗಿ ಬರುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದ್ದಾನೆ ಎಂದು ತಿಳಿದು ಬಂದಿದೆ.
ಇನ್ನು ಘಟನಾ ಸ್ಥಳಕ್ಕೆ ಮಂಚೆನಹಳ್ಳಿ ಪೊಲೀಸ್ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
ವರದಿ : ಚಿಕ್ಕತೇಕಹಳ್ಳಿ ಡಿ. ಶಿವಕುಮಾರ್ ಪಬ್ಲಿಕ್ ನೆಕ್ಸ್ಟ್ ಚಿಕ್ಕಬಳ್ಳಾಪುರ
PublicNext
05/09/2025 02:02 pm