", "articleSection": "Education", "image": { "@type": "ImageObject", "url": "https://prod.cdn.publicnext.com/s3fs-public/38633520250905053845filescapture.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "Suresh Gadag" }, "editor": { "@type": "Person", "name": "9113093241" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಗದಗ : ತತ್ವಜ್ಞಾನಿ, ಶ್ರೇಷ್ಠ ಶಿಕ್ಷಕ, ರಾಷ್ಟಪತಿಯಾಗಿ ಡಾ. ರಾಧಾಕೃಷ್ಣನ್‌ರವರ ಶಿಸ್ತು, ಶ್ರದ್ದೆ ನಮಗೆಲ್ಲ ಮಾದರಿಯಾಗಿದೆ ಎಂದು ವಿಧಾನ ಪರಿಷತ್...Read more" } ", "keywords": "Node", "url": "https://dashboard.publicnext.com/node" }
ಗದಗ : ತತ್ವಜ್ಞಾನಿ, ಶ್ರೇಷ್ಠ ಶಿಕ್ಷಕ, ರಾಷ್ಟಪತಿಯಾಗಿ ಡಾ. ರಾಧಾಕೃಷ್ಣನ್‌ರವರ ಶಿಸ್ತು, ಶ್ರದ್ದೆ ನಮಗೆಲ್ಲ ಮಾದರಿಯಾಗಿದೆ ಎಂದು ವಿಧಾನ ಪರಿಷತ್ ಶಾಸಕ ಎಸ್ ವಿ ಸಂಕನೂರ ಅವರು ಅಭಿಪ್ರಾಯ ಪಟ್ಟರು.
ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಗದಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಡಾ. ಸರ್ವಪಲ್ಲಿ ರಾಧಾಕೃಷ್ಣನ್‌ರವರ ಜನ್ಮದಿನಾಚರಣೆ ಅಂಗವಾಗಿ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ, ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಹಾಗೂ ನಿವೃತ್ತ ಶಿಕ್ಷಕರಿಗೆ ಸನ್ಮಾನ ಸಮಾರಂಭ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಡಾ. ಸರ್ವಪಲ್ಲಿ ರಾಧಾಕೃಷ್ಣನ್‌ರವರ ಅವರ ಶಿಸ್ತು ಶ್ರದ್ದೆಯಿಂದ ಕಾರ್ಯ ನಿರ್ವಹಿಸಿ, ಉನ್ನತಮಟ್ಟ ತಲುಪಿದರು. ಅವರಂತೆ ನಾವೆಲ್ಲರೂ ಸಹ ಶ್ರದ್ಧೆ ಪ್ರಾಮಾಣಿಕತೆ ಜೀವನದಲ್ಲಿ ಅಳವಡಿಸಿಕೊಂಡು ಮುಂದೆ ಸಾಗಬೇಕು ಎಂದರು.
ಬಹಳ ಶಿಕ್ಷಕರು ಸ್ಪರ್ಧಾತ್ಮಕ ಪರೀಕ್ಷೆ ಬರೆದು, ಉನ್ನತ ಹುದ್ದೆ ಅಲಂಕರಿಸಿ ಸಮಾಜ ಸೇವೆ ಮಾಡುತ್ತಿದ್ದಾರೆ. ಡಾ. ಸರ್ವಪಲ್ಲಿ ರಾಧಾಕೃಷ್ಣನ್‌ರವರ ಜನ್ಮದಿನಾಚರಣೆ ಅಂಗವಾಗಿ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ಮಾಡ್ತಿದ್ದೇವೆ. ರಾಧಾಕೃಷ್ಣನ್‌ರವರ ಅವರಿಗೆ ಶಿಕ್ಷಕರ ಮೇಲೆ ಅಪಾರ ಪ್ರೀತಿ ಗೌರವ ಇದ್ದುದರಿಂದ ತಮ್ಮ ದಿನಾಚರಣೆ ಶಿಕ್ಷಕರ ದಿನಾಚರಣೆಯಾಗಿ ಆಚರಣೆ ಮಾಡಲು ತಿಳಿಸಿದರು ಎಂದರು.
ಡಾ. ಸರ್ವಪಲ್ಲಿ ರಾಧಾಕೃಷ್ಣನ್‌ರವರ ಆದರ್ಶಗಳನ್ನು ಜೀವನದುದ್ದಕ್ಕೂ ಅಳವಡಿಸಿಕೊಂಡು ನಾವೇಲ್ಲರೂ ಶ್ರೇಷ್ಠ ಶಿಕ್ಷಕರಾಗಿ ಸುಭದ್ರ ಸುಶಿಕ್ಷಿತ ರಾಷ್ಟ್ರ ನಿರ್ಮಾಣ ಮಾಡುವಲ್ಲಿ ಕೈಜೊಡಿಸೋಣ ಎಂದು ಶಾಸಕ ಎಸ್ ವಿ ಸಂಕನೂರ ಕರೆ ನೀಡಿದರು.
Kshetra Samachara
05/09/2025 05:38 pm