ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಡೂರು: ಬಾಲಕಿ ಮೇಲೆ ದೌರ್ಜನ್ಯ – ಆರೋಪಿಗೆ 3 ವರ್ಷ ಜೈಲು ಶಿಕ್ಷೆ

ಕಡೂರು: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪಿಗೆ ಚಿಕ್ಕಮಗಳೂರು ಘನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (ಎಫ್.ಟಿ.ಎಸ್.ಸಿ.–1)ವು 3 ವರ್ಷಗಳ ಜೈಲು ಶಿಕ್ಷೆ ಹಾಗೂ ರೂ.20,000 ದಂಡ ವಿಧಿಸಿರುವ ತೀರ್ಪು ಪ್ರಕಟವಾಗಿದೆ. ಕಡೂರು ಪೊಲೀಸ್ ಠಾಣೆಯಲ್ಲಿ ಮೊ.ನಂ.238/2024ರಲ್ಲಿ ಭಾರತೀಯ ದಂಡ ಸಂಹಿತೆಯ ಕಲಂ 127(2), 75 ಬಿಎನ್‌ಎಸ್ ಹಾಗೂ ಪೋಕೋ ಆಕ್ಟ್‌ನ ಕಲಂ 8 ಮತ್ತು 18ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿ ರಾಜು ಎಸ್ (50), ಅರಸು ಮಕ್ಕಳ ಬೀದಿ, ಕೋಟೆ, ಕಡೂರು ಮೂಲದವನಾಗಿದ್ದು, ನೊಂದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ವಿಷಯ ಸಾಬೀತಾಗಿದೆ. ತೀರ್ಪಿನ ಪ್ರಕಾರ, ಕರ್ನಾಟಕ ಸಂತ್ರಸ್ತ ಪರಿಹಾರ ಯೋಜನೆ – 2011ರ ಅಡಿಯಲ್ಲಿ ನೊಂದ ಬಾಲಕಿಗೆ ರೂ.1,00,000 ಪರಿಹಾರ ನೀಡಲು ನ್ಯಾಯಾಲಯ ಆದೇಶಿಸಿದೆ. ಈ ಪ್ರಕರಣದ ತನಿಖೆಯನ್ನು ಕಡೂರು ವೃತ್ತದ ಸಿ.ಪಿ.ಐ. ರಫೀಕ್ ಎಂ. ಅವರು ನಡೆಸಿ ದೋಷಾರೋಪಣಾ ಪತ್ರವನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕರಾದ ಬಿ. ಭರತ್ ಕುಮಾರ್ ವಾದ ಮಂಡಿಸಿದ್ದರು. ಎ.ಎಸ್.ಐ. ದೇವೇಂದ್ರ ಕುಮಾರ್ ಎಸ್.ಓ. ಹಾಗೂ ಪೊಲೀಸ್ ಸಿಬ್ಬಂದಿಗಳಾದ ವಸಂತ್ ಕುಮಾರ್ ಮತ್ತು ನಜೀರ್ ಬಿ.ಎ. ತನಿಖೆಗೆ ಸಹಕಾರ ನೀಡಿದ್ದಾರೆ.

Edited By : PublicNext Desk
Kshetra Samachara

Kshetra Samachara

05/09/2025 09:44 pm

Cinque Terre

2.04 K

Cinque Terre

0

ಸಂಬಂಧಿತ ಸುದ್ದಿ