ಚಾಮರಾಜನಗರ: ಮನೆಯ ಮುಂಭಾಗ ಆಟವಾಡ್ತಿದ್ದ ಬಾಲಕನ ಮೇಲೆ ಏಕಾಏಕಿ ದಾಳಿ ನಡೆಸಿದ ಬೀದಿನಾಯಿ ಹಿಂಡು ತೀವ್ರವಾಗಿ ಗಾಯಗೊಳಿಸಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲೂಕಿನ ತಿಮ್ಮರಾಜಿಪುರದಲ್ಲಿ ನಡೆದಿದೆ.
ತಿಮ್ಮರಾಜಿಪುರ ಗ್ರಾಮದ ಶಶಿ ಮತ್ತು ಸುಧಾ ದಂಪತಿಯ ಪುತ್ರ ಆರು ವರ್ಷದ ದಿಶಾಂತ್, ನಾಯಿಗಳ ದಾಳಿಗೆ ತುತ್ತಾದ ಬಾಲಕನಾಗಿದ್ದು ಕೊಳ್ಳೇಗಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಸಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ನಮ್ಮ ಏರಿಯಾದಲ್ಲಿ ಬೀದಿನಾಯಿಗಳ ಹಾವಳಿ ಮಿತಿಮೀರಿದ್ದು, ರಾತ್ರಿ ವೇಳೆ ತಿರುಗಾಡಲು ಸಹ ಹಿಂಜರಿಯುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಆದುದರಿಂದ ಗ್ರಾಮಪಂಚಾಯತಿನವರು ಬೀದಿನಾಯಿಗಳ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.
Kshetra Samachara
05/09/2025 10:01 pm