ಮಡಿಕೇರಿ: ಕರ್ನಾಟಕ ದಲಿತ ಸಂಘರ್ಷ ಸಮಿತಿ ಕೊಡಗು ಜಿಲ್ಲಾ ಘಟಕದ ವತಿಯಿಂದ ಕರ್ನಾಟಕ ಮಾಜಿ ಮುಖ್ಯಮಂತ್ರಿ, ಸಾಮಾಜಿಕ ನ್ಯಾಯದ ಹರಿಕಾರ ಡಿ.ದೇವರಾಜ್ ಅರಸು ಅವರ 110ನೇ ಜನ್ಮದಿನಾಚರಣೆಯ ಪ್ರಯುಕ್ತ ವಿದ್ಯುತ್ ಇಲಾಖೆಯ ನೌಕರರನ್ನು ಸನ್ಮಾನಿಸಲಾಯಿತು.
ನಗರದ ಪತ್ರಿಕಾ ಭವನದಲ್ಲಿ ನಡೆದ ಕಾರ್ಯಕ್ರಮಮದಲ್ಲಿ ಗಣ್ಯರು ಡಿ.ದೇವರಾಜ್ ಅರಸು ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕನ್ನಡ ಸಾಹಿತ್ಯ ಪರಿಷತ್‌ನ ಕೊಡಗು ಜಿಲ್ಲಾಧ್ಯಕ್ಷ ಎಂ.ಪಿ.ಕೇಶವ ಕಾಮತ್, ವಿದ್ಯುತ್ ಇಲ್ಲದೆ ದಿನ ಕಳೆಯಲು ಸಾಧ್ಯವಿಲ್ಲ. ಸಾರ್ವಜನಿಕರಿಗೆ ಉತ್ತಮ ಸೇವೆ ನೀಡುವ ನಿಟ್ಟಿನಲ್ಲಿ ವಿದ್ಯುತ್ ಇಲಾಖೆಯ ನೌಕರರು ಹಗಲು ರಾತ್ರಿ ಎನ್ನದೇ, ಗಾಳಿ, ಮಳೆ, ಚಳಿಯನ್ನು ಲೆಕ್ಕಿಸದೇ ದಿನದ ಇಪ್ಪತ್ತನಾಲ್ಕು ಗಂಟೆಯೂ ನಾಗರಿಕರ ಸೇವೆಗೆ ಶ್ರಮಿಸುತ್ತಿರುವುದು ಶ್ಲಾಘನೀಯ. ಸಾರ್ವಜನಿಕರು ವಿದ್ಯುತ್ ನೌಕರರ ಸಮಸ್ಯೆಯನ್ನು ಅರಿತು ಅವರಿಗೆ ಉತ್ತಮ ಸಹಕಾರ ನೀಡಬೇಕು ಎಂದರು. ಕೊನೆಯಲ್ಲಿ ವಿದ್ಯುತ್ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ನೌಕರರನ್ನ ಇದೇ ಸಂಧರ್ಭದಲ್ಲಿ ಸನ್ಮಾನಿಸಿ ಗೌರವಿಸಿದ್ರು.
Kshetra Samachara
06/09/2025 06:55 am