ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಿಕ್ಕಮಗಳೂರು: ಕಾಫಿನಾಡಲ್ಲಿ ಸಾರ್ವಜನಿಕ ಗಣಪತಿಗಳ ವಿಸರ್ಜನೆ

ಚಿಕ್ಕಮಗಳೂರು: ಗಣೇಶ ಚತುರ್ಥಿ ಪ್ರಯುಕ್ತ ಪ್ರತಿಷ್ಠಾಪಿಸಿದ್ದ ಸಾರ್ವಜನಿಕ ಗಣೇಶ ಮೂರ್ತಿಗಳನ್ನು ಅದ್ದೂರಿಯಾಗಿ ವಿಸರ್ಜನೆ ಮಾಡಲಾಗುತ್ತಿದೆ. ಚಿಕ್ಕಮಗಳೂರಿನ ವಿಜಯಪುರ ಪೆಂಡಾಲ್ ನಲ್ಲಿ ಪ್ರತಿಷ್ಠಾಪಿಸಲಾಗಿದ್ದ ಗಣೇಶ ಮೂರ್ತಿಯನ್ನು ಅದ್ದೂರಿ ಮೆರವಣಿಗೆಯ ಮೂಲಕ ವಿಸರ್ಜನೆ ಮಾಡಲಾಯಿತು.

ವಿಜಯಪುರ ಪೆಂಡಾಲ್ ನಿಂದ ಹೊರಟ ಮೆರವಣಿಗೆಯಲ್ಲಿ ನೂರಾರು ಜನ ಪಾಲ್ಗೊಂಡಿದ್ದರು, ಡಿಜೆ ನಿಷೇಧ ವಿರುವುದರಿಂದ ಧ್ವನಿವರ್ಧಕಗಳನ್ನು ಬಳಸಿಕೊಂಡು ಮೆರವಣಿಗೆಯಲ್ಲಿ ಸಾಗಿ ಕೋಟೆ ಕೆರೆಯ ಕಲ್ಯಾಣಿಯಲ್ಲಿ ಗಣಪನನ್ನು ವಿಸರ್ಜಿಸಲಾಯಿತು. ಮೆರವಣಿಗೆಯಲ್ಲಿ ವಾದ್ಯಗಳ ಸದ್ದಿಗೆ ಯುವಕ ಯುವತಿಯರು ಹುಚ್ಚೆದ್ದು ಕುಣಿದರು

Edited By : PublicNext Desk
Kshetra Samachara

Kshetra Samachara

06/09/2025 09:14 am

Cinque Terre

620

Cinque Terre

0

ಸಂಬಂಧಿತ ಸುದ್ದಿ