", "articleSection": "Public News", "image": { "@type": "ImageObject", "url": "https://prod.cdn.publicnext.com/s3fs-public/41829720250906113115filescapture.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "ShirahattiGowrish" }, "editor": { "@type": "Person", "name": "9739386670" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": " ಶಿರಹಟ್ಟಿ: ಕರ್ನಾಟಕ ಲೋಕಾಯುಕ್ತ ಗದಗ ಕಚೇರಿಯ ಪೊಲೀಸ್ ಅಧಿಕಾರಿಗಳು ಸೆ.10 ರಂದು ಬೆಳಿಗ್ಗೆ 10.30 ರಿಂದ ಮದ್ಯಾಹ್ನ 1-30 ಗಂಟೆಯವರೆಗೆ ಪಟ್ಟಣ...Read more" } ", "keywords": "Node", "url": "https://dashboard.publicnext.com/node" }
ಶಿರಹಟ್ಟಿ: ಕರ್ನಾಟಕ ಲೋಕಾಯುಕ್ತ ಗದಗ ಕಚೇರಿಯ ಪೊಲೀಸ್ ಅಧಿಕಾರಿಗಳು ಸೆ.10 ರಂದು ಬೆಳಿಗ್ಗೆ 10.30 ರಿಂದ ಮದ್ಯಾಹ್ನ 1-30 ಗಂಟೆಯವರೆಗೆ ಪಟ್ಟಣದ ತಹಶೀಲ್ದಾರ್ ಕಚೇರಿಯ ಸಭಾಭವನದಲ್ಲಿ ಜನ ಸಂಪರ್ಕ ಸಭೆ ಮತ್ತು ಸಾರ್ವಜನಿಕರಿಂದ ಅಹವಾಲು ಸ್ವೀಕಾರ ಕಾರ್ಯಕ್ರಮ ಏರ್ಪಡಿಸಲಾಗಿದೆ.
ಸಾರ್ವಜನಿಕ ಕುಂದು-ಕೊರತೆಗಳ ಅಹವಾಲು ಸ್ವೀಕರಿಸುವ ಸಭೆಯಲ್ಲಿ ಸರ್ಕಾರದ ಎಲ್ಲ ಕಚೇರಿಗಳ ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಜರಿರುತ್ತಾರೆ. ಯಾವುದೇ ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕರ ಕೆಲಸಗಳನ್ನು ಮಾಡಿಕೊಡಲು ಅಧಿಕಾರಿಗಳು ಉದ್ದೇಶ ಪೂರ್ವಕವಾಗಿ ವಿಳಂಬ ಮಾಡುತ್ತಿರುವ ಬಗ್ಗೆ ಲಿಖಿತ ದೂರು ನೀಡಬಹುದಾಗಿದೆ.
ಸರ್ಕಾರದ ಯೋಜನೆಗಳ ಲಾಭವನ್ನು ಅರ್ಹರಿಗೆ ತಲುಪಿಸುವಲ್ಲಿ ತಾರತಮ್ಯ ಮಾಡುತ್ತಿರುವ ಬಗ್ಗೆ, ಅನಗತ್ಯ ವಿಳಂಬ, ಕಳಪೆ ಕಾಮಗಾರಿ ನಡೆಸಿ ಹಣ ದುರುಪಯೋಗ ಪಡಿಸಿದ ದೂರುಗಳು ಸೇರಿದಂತೆ ಇನ್ನಿತರೆ ಅಕ್ರಮಗಳ ಬಗ್ಗೆ ದೂರು ಸಲ್ಲಿಸಬಹುದಾಗಿದೆ, ಎಂದು ಗದಗ ಕರ್ನಾಟಕ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Kshetra Samachara
06/09/2025 11:31 am