ಮಡಿಕೇರಿ: RJD ಪಕ್ಷದ ನಾಯಕರು ಪ್ರಧಾನ ಮಂತ್ರಿ ನರೇಂದ್ರ ಮೋದಿ ತಾಯಿ ನಿಂದನೆ ಹಾಗೂ ಕಾಂಗ್ರೆಸ್ ನಾಯಕ ಆರ್.ವಿ ದೇಶಪಾಂಡೆ ಮಹಿಳಾ ಪತ್ರಕರ್ತೆಯನ್ನ ನಿಂದಿಸಿದ ವಿಚಾರವನ್ನ ಖಂಡಿಸಿ ಕೊಡಗು ಜಿಲ್ಲಾ ಮಹಿಳಾ ಮೋರ್ಚ ವತಿಯಿಂದ ಅಧ್ಯಕ್ಷೆ ಅನಿತಾ ಪೂವಯ್ಯ ನೇತೃತ್ವದಲ್ಲಿ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಿತ್ತು. ಮಡಿಕೇರಿಯ ಹಳೆ ಖಾಸಗಿ ಬಸ್ ನಿಲ್ದಾಣದಲ್ಲಿ ಜಮಾಯಿಸಿದ ಕಾರ್ಯಕರ್ತರು ಮಿತ್ರ ಪಕ್ಷಗಳ ವಿರುದ್ದು ದಿಕ್ಕಾರ ಕೂಗಿ ಆಕ್ರೋಶ ಹೊರ ಹಾಕಿದ್ರು ಜೊತೆಗೆ ಮಹಿಳೆಯರನ್ನ ನಿಂದಿಸಿದವರು ಕೂಡಲೆ ಕ್ಷಮೆಯಾಚಿಸುವಂತೆ ಅನಿತಾ ಪೂವಯ್ಯ ಒತ್ತಾಯಿಸಿದ್ರು.
Kshetra Samachara
06/09/2025 11:48 am