", "articleSection": "Accident", "image": { "@type": "ImageObject", "url": "https://prod.cdn.publicnext.com/s3fs-public/474798-1757139994-youtubenew.01_16_14_28.Still1117.png", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "Purashottama Surapur" }, "editor": { "@type": "Person", "name": "Vinay.Hegde" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": " ಯಾದಗಿರಿ: ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಅರಳಹಳ್ಳಿ ಗ್ರಾಮದ ಸಮೀಪದ ರಾಜ್ಯ ಹೆದ್ದಾರಿಯಲ್ಲಿ ಬೊಲೆರೋ ಪಿಕಪ್ ವಾಹನ ಅಪಘಾತವಾಗಿ ಗಂಭೀರವಾಗ...Read more" } ", "keywords": "Yadgir accident, pickup vehicle accident Yadgir, Yadgir road accident, Congress leader helps accident victims, Yadgir news today, Yadgir district accident, Karnataka road accident, Congress leader Yadgir, Yadgir hospital news, injured admitted to hospital Yadgir, pickup truck crash Yadgir, Yadgir breaking news, social work by Congress leader", "url": "https://dashboard.publicnext.com/node" }
ಯಾದಗಿರಿ: ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಅರಳಹಳ್ಳಿ ಗ್ರಾಮದ ಸಮೀಪದ ರಾಜ್ಯ ಹೆದ್ದಾರಿಯಲ್ಲಿ ಬೊಲೆರೋ ಪಿಕಪ್ ವಾಹನ ಅಪಘಾತವಾಗಿ ಗಂಭೀರವಾಗಿ ಗಾಯಗೊಂಡಿದ್ದ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸುವ ಮೂಲಕ ಕೆಪಿಸಿಸಿ ಹಿಂದುಳಿದ ವರ್ಗಗಳ ರಾಜ್ಯ ಪ್ರಧಾನ ಕಾರ್ಯದರ್ಶಿ ರಂಗನಗೌಡ ಪಾಟೀಲ ದೇವಿಕೇರ ಮಾನವೀಯತೆ ಮೆರೆದಿದ್ದಾರೆ.
ಬೊಲೆರೋ ವಾಹನ ಪಲ್ಟಿಯಾಗಿ ವಾಹನದಲ್ಲಿದ್ದ ಮೂವರು ಗಂಭೀರವಾಗಿ ಗಾಯಗೊಂಡು, ನರಳಾಡುತ್ತಿರುವುದನ್ನು ಕಂಡು ತಕ್ಷಣವೇ ತಮ್ಮ ವಾಹನದಲ್ಲಿ ಸುರಪುರ ನಗರ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಕಲಬುರ್ಗಿಗೆ ರವಾನಿಸಲಾಗಿದೆ ಎಂದು ತಿಳಿದುಬಂದಿದೆ.
ಅಪಘಾತದ ತೀವ್ರತೆಗೆ ವಾಹನದಲ್ಲಿದ್ದ ಎಲ್ಲಾ ಸಾಮಗ್ರಿಗಳು ಚೆಲ್ಲಾಪಿಲ್ಲಿಯಾಗಿದ್ದು, ರಾಜ್ಯ ಹೆದ್ದಾರಿಯಲ್ಲಿ ಕೆಲಕಾಲ ಟ್ರಾಫಿಕ್ ಸಮಸ್ಯೆ ಉಂಟಾಯಿತು. ರಂಗನಗೌಡ ಪಾಟೀಲ್ ಅವರ ಉತ್ತಮ ಕಾರ್ಯಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.
PublicNext
06/09/2025 11:56 am