ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಎನ್.ಆರ್ ಪುರ: ವಿದ್ಯಾರ್ಥಿ ನಿಲಯಕ್ಕೆ ಶಾಸಕ ರಾಜೇಗೌಡ ದಿಢೀರ್ ಭೇಟಿ, ಪರಿಶೀಲನೆ

ಎನ್.ಆರ್ ಪುರ: ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ ತಾಲೂಕಿನ ಡಾ. ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯಕ್ಕೆ ಶೃಂಗೇರಿ ಶಾಸಕ ಟಿ.ಡಿ. ರಾಜೇಗೌಡ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ವೇಳೆ ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳುವಂತೆ ವಾರ್ಡನ್‌ಗೆ ಸೂಚನೆ ನೀಡಿದ ಅವರು, ವಸತಿ ಶಾಲೆಯ ಅಡುಗೆ ಕೋಣೆ, ಆಹಾರ ಪದಾರ್ಥಗಳ ಗುಣಮಟ್ಟ ಹಾಗೂ ವಿದ್ಯಾರ್ಥಿಗಳಿಗೆ ನೀಡುತ್ತಿರುವ ಊಟವನ್ನು ಪರಿಶೀಲಿಸಿದರು.

ವಿದ್ಯಾರ್ಥಿಗಳೊಂದಿಗೆ ವಿದ್ಯಾಭ್ಯಾಸ ಹಾಗೂ ವಸತಿ ನಿಲಯದ ಸಮಸ್ಯೆಗಳ ಕುರಿತು ಮಾಹಿತಿ ಪಡೆದರು. ಸಮಯಕ್ಕೆ ಸರಿಯಾಗಿ ಹಾಸ್ಟೆಲ್‌ಗೆ ಮರಳುವಂತೆ ಸೂಚನೆ ನೀಡಿದ್ರು. ಇಲ್ಲದಿದ್ದರೆ ಮೇಲಾಧಿಕಾರಿಗಳಿಗೆ ವಿದ್ಯಾರ್ಥಿಗಳ ಕುರಿತು ಮಾಹಿತಿ ನೀಡುವಂತೆ ಸೂಚನೆ ನೀಡಿದರು. ಈ ಸಂದರ್ಭದಲ್ಲಿ ಎನ್.ಆರ್. ಪುರ ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಜುಬೇದ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Edited By :
PublicNext

PublicNext

06/09/2025 01:18 pm

Cinque Terre

15.26 K

Cinque Terre

0

ಸಂಬಂಧಿತ ಸುದ್ದಿ