ಬೆಳಗಾವಿ: ಬಿಮ್ಸ್ ಆಸ್ಪತ್ರೆಯಲ್ಲಿ ನಕಲಿ ವೈದ್ಯ ವಿದ್ಯಾರ್ಥಿನಿ ಚಿಕಿತ್ಸೆ ನೀಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಮ್ಸ್ ನಿರ್ದೇಶಕ ಅಶೋಕ ಶೆಟ್ಟಿ ಆಂತರಿಕ ತನಿಖೆಗೆ ಆದೇಶ ನೀಡಿದ್ದಾರೆ.
ನಾನು ಬಿಮ್ಸ್ ವಿದ್ಯಾರ್ಥಿನಿ ಎಂದು ಹೇಳಿಕೊಂಡು ಆಸ್ಪತ್ರೆಯಲ್ಲಿ ಯುವತಿಯೊಬ್ಬಳು ವಸತಿ ನಿಲಯ, ಓಪಿಡಿಯಲ್ಲಿ ಮೂರ್ನಾಲ್ಕು ತಿಂಗಳು ಓಡಾಟ ನಡೆಸಿದ್ದಾಳೆ. ಈ ಸಂಬಂಧ ಮಾಧ್ಯಮಗಳಲ್ಲಿ ಸುದ್ದಿ ಪ್ರಸಾರವಾದ ಬೆನ್ನಲ್ಲೇ ಮೂವರು ಸದಸ್ಯರನ್ನೊಳಗೊಂಡ ಸಮಿತಿ ರಚನೆ ಮಾಡಿ ತನಿಖೆಗೆ ಆದೇಶ ನೀಡಲಾಗಿದೆ.
ಡಾ.ಈರಣ್ಣಾ ಪಲ್ಲೇದ್, ಡಾ.ಕೇಶವ್ ಹೆಚ್.ಬಿ, ಡಾ.ವಸಂತ ಕಬ್ಬೂರ ನೇತೃತ್ವದಲ್ಲಿ ತನಿಖೆ ನಡೆಯಲಿದ್ದು, ಒಂದು ವಾರದೊಳಗೆ ತನಿಖೆ ನಡೆಸಿ ಕಚೇರಿಗೆ ವರದಿ ಸಲ್ಲಿಸಲು ಸೂಚನೆ ನೀಡಲಾಗಿದೆ.
Kshetra Samachara
06/09/2025 03:22 pm