ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ನಿವೃತ್ತಿಯೇ ಇಲ್ಲದ ಶ್ರೇಷ್ಠ ವೃತ್ತಿ ಶಿಕ್ಷಕ ವೃತ್ತಿ - ಶಾಸಕ ಯಶ್ ಪಾಲ್ ಸುವರ್ಣ

ಉಡುಪಿ: ಗುರುವಿನ ಗುಲಾಮನಾಗುವ ತನಕ ದೊರೆಯದಣ್ಣ ಮುಕ್ತಿ ಎಂಬ ದಾಸ ವಾಣಿಯಂತೆ ಜಗತ್ತಿನ ಪ್ರತಿಯೊಬ್ಬ ಸಾಧಕನ ಸಾಧನೆಯಲ್ಲಿ ಗುರುಗಳ ಪಾತ್ರ ಮಹತ್ವದ್ದಾಗಿದ್ದು, ಪ್ರಪಂಚದ ಅತೀ ಶ್ರೇಷ್ಠ ಗೌರವಯುತ ಶಿಕ್ಷಕ ವೃತ್ತಿಯಲ್ಲಿ ಸೇವೆ ಸಲ್ಲಿಸಿರುವ ಶಿಕ್ಷಕರು ತಮ್ಮ ವಿದ್ಯಾರ್ಥಿಗಳ ಪಾಲಿಗೆ ಎಂದಿಗೂ ನಿವೃತ್ತರಾಗದೆ ಗುರುಗಳಾಗಿಯೇ ಸ್ಥಾನ ಪಡೆಯುವ ಮೂಲಕ ಸಮಾಜಕ್ಕೆ ಸದಾ ಮಾದರಿಯಾಗಿದ್ದಾರೆ ಎಂದು ಉಡುಪಿ ಶಾಸಕ ಯಶ್ ಸುವರ್ಣ ಹೇಳಿದರು.

ಉಡುಪಿ ನಗರ ಬಿಜೆಪಿ ಮಹಿಳಾ ಮೋರ್ಚಾದ ವತಿಯಿಂದ ಉಡುಪಿ ಚಿತ್ತಾರ ಹೊಟೇಲ್ ಸಭಾಂಗಣದಲ್ಲಿ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದರು.

ಶಿಕ್ಷಕರ ದಿನಾಚರಣೆ ಸಮಾರಂಭದಲ್ಲಿ ಉಡುಪಿ ನಗರ ಭಾಗದ ವಿವಿಧ ಶಾಲಾ ಕಾಲೇಜುಗಳಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸಿ ನಿವೃತ್ತರಾದ 75 ಮಂದಿ ಶಿಕ್ಷಕರಿಗೆ ಸನ್ಮಾನಿಸಿ ಗೌರವಿಸಲಾಯಿತು.

ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ವಿಧಾನಪರಿಷತ್ ಸದಸ್ಯರಾದ ಡಾ. ಧನಂಜಯ ಸರ್ಜಿ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಕಿರಣ್ ಕುಮಾರ್, ಉಡುಪಿ ನಗರ ಬಿಜೆಪಿ ಅಧ್ಯಕ್ಷರಾದ ದಿನೇಶ್ ಅಮೀನ್, ಗ್ರಾಮಾಂತರ ಬಿಜೆಪಿ ಅಧ್ಯಕ್ಷರಾದ ರಾಜೀವ್ ಕುಲಾಲ್, ಉಡುಪಿ ನಗರ ಮಹಿಳಾ ಮೋರ್ಚಾ ಅಧ್ಯಕ್ಷರಾದ ನೀತಾ ಪ್ರಭು, ಮಹಿಳಾ ಮೋರ್ಚಾದ ಜಿಲ್ಲಾಧ್ಯಕ್ಷರಾದ ಸಂಧ್ಯಾ ರಮೇಶ್, ವೀಣಾ ಶೆಟ್ಟಿ, ನಗರ ಬಿಜೆಪಿ ಪ್ರಧಾನ ಕಾರ್ಯದರ್ಶಿ ಜಗದೀಶ್ ಆಚಾರ್ಯ ಕಪ್ಪೆಟ್ಟು, ಮಹಿಳಾ ಮೋರ್ಚಾದ ಪದಾಧಿಕಾರಿಗಳು, ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

06/09/2025 04:05 pm

Cinque Terre

872

Cinque Terre

0

ಸಂಬಂಧಿತ ಸುದ್ದಿ