", "articleSection": "Crime,Agriculture", "image": { "@type": "ImageObject", "url": "https://prod.cdn.publicnext.com/s3fs-public/styles/large/public/videos/thumbnails/2300087/thumbnail-2300087_0001.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "VeereshYadigiri" }, "editor": { "@type": "Person", "name": "Vinay.Hegde" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಯಾದಗಿರಿ : ಜಮೀನಿನಲ್ಲಿ ವಿಷ ಸೇವಿಸಿ ರೈತನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಯಾಳಗಿ ಗ್ರಾಮದಲ್ಲಿ ಜರ...Read more" } ", "keywords": "Yadgir farmer suicide, Karnataka farmer suicide, pesticide suicide Yadgir, farmer crisis Karnataka, Yadgir agriculture news, farmer deaths in Karnataka, unending farmer suicides, pesticide consumption suicide, Yadgir rural issues, Karnataka agrarian crisis, farmer mental health Karnataka, Karnataka rural distress, farmer suicide 2025, Yadgir breaking news, agriculture-related suicides", "url": "https://dashboard.publicnext.com/node" }
ಯಾದಗಿರಿ : ಜಮೀನಿನಲ್ಲಿ ವಿಷ ಸೇವಿಸಿ ರೈತನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಯಾಳಗಿ ಗ್ರಾಮದಲ್ಲಿ ಜರುಗಿದೆ. ಬೆಳೆಗೆ ಸಿಂಪಡಿಸುವ ಕ್ರಿಮಿನಾಶಕ ಸೇವಿಸಿ ಜಮೀನಿನಲ್ಲಿಯೇ ರೈತ ಅಸು ನೀಗಿದ್ದಾನೆ.
ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಯಾಳಗಿ ಗ್ರಾಮದ ರೈತ ಸಿದ್ದಣ್ಣ ಹಡಪದ ( ೫೬) ಮೃತ ದುರ್ದೈವಿ. ತನ್ನ ನಾಲ್ಕು ಎಕರೆ ಜಮೀನಿನಲ್ಲಿ ಸಾಲಸೋಲ ಮಾಡಿ ತೊಗರಿ ಬೆಳೆ ಬಿತ್ತನೆ ಮಾಡಿದ. ಆದ್ರೆ ಅತಿವೃಷ್ಠಿಯಿಂದ ಬೆಳೆ ಹಾನಿಯಾದ ಪ್ರಯುಕ್ತ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜರುಗಿದೆ.
ಬೆಳೆಗಾಗಿ 5 ಲಕ್ಷಕ್ಕೂ ಅಧಿಕ ಸಾಲ ಮಾಡಿಕೊಂಡಿದ್ದ ರೈತ ಈ ಹಿನ್ನೆಲೆ ಬೆಳೆ ಕೈಕೊಟ್ಟಿದ್ದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ವಿಷಯ ತಿಳಿದು ಸ್ಥಳಕ್ಕೆ ಬಂದ ಪೊಲೀಸರು ಪರಿಶೀಲನೆ ಮಾಡಿ ಪ್ರಕರಣ ದಾಖಲಿಸಿಕೊಂಡರು. ಕೆಂಭಾವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತ ರೈತನ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ .
PublicNext
06/09/2025 04:58 pm