", "articleSection": "Politics,Religion", "image": { "@type": "ImageObject", "url": "https://prod.cdn.publicnext.com/s3fs-public/45794020250906052240filescapture.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "RohitMadakeri" }, "editor": { "@type": "Person", "name": "9535981195" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಮಡಿಕೇರಿ: ಶ್ರೀ ಕ್ಷೇತ್ರ ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಎಸಗಿದ ಆರೋಪ ಹೊತ್ತಿರುವ ಬುರುಡೆ ಗ್ಯಾಂಗ್ ಸದಸ್ಯರು ಕಳೆದ ವರ್ಷ ಕೊಡಗು ಜಿಲ್ಲೆಗೂ ಭ...Read more" } ", "keywords": "Node", "url": "https://dashboard.publicnext.com/node" }
ಮಡಿಕೇರಿ: ಶ್ರೀ ಕ್ಷೇತ್ರ ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಎಸಗಿದ ಆರೋಪ ಹೊತ್ತಿರುವ ಬುರುಡೆ ಗ್ಯಾಂಗ್ ಸದಸ್ಯರು ಕಳೆದ ವರ್ಷ ಕೊಡಗು ಜಿಲ್ಲೆಗೂ ಭೇಟಿ ನೀಡಿ ಜನತೆಯಲ್ಲಿ ಕ್ಷೇತ್ರದ ಬಗ್ಗೆ ಗೊಂದಲ ಮೂಡಿಸಿ ಹುನ್ನಾರ ನಡೆಸಿದ ವಿಚಾರ ಈಗ ಬೆಳಕಿಗೆ ಬಂದಿದೆ.
ಈ ಬಗ್ಗೆ ಮಾಹಿತಿ ದೊರೆತ ಕೂಡಲೇ ಕ್ಷೇತ್ರದ ಭಕ್ತರು ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳನ್ನು ಭೇಟಿ ಮಾಡಿ ದೂರು ನೀಡಿದ್ದರು. ದೂರಿನಲ್ಲಿ ಸಮಗ್ರ ದಾಖಲೆ ನೀಡಿದ್ದರಿಂದ ವರಿಷ್ಠಾಧಿಕಾರಿಗಳು ಬುರುಡೆ ಗ್ಯಾಂಗ್ ಸದಸ್ಯರ ಕಪೋಲ ಕಲ್ಪಿತ ಕಾರ್ಯಾಚರಣೆಗೆ ಬ್ರೇಕ್ ಹಾಕುವಲ್ಲಿ ಯಶಸ್ವಿಯಾಗಿದ್ದರು. ವಿಫಲಗೊಂಡ ಬೆನ್ನಲ್ಲೇ ಗ್ಯಾಂಗ್ ಸದಸ್ಯರು ಜಿಲ್ಲೆಯಿಂದ ಕಾಲ್ಕಿತ್ತಿದ್ದರು.
2024 ಡಿಸೆಂಬರ್ ಅವಧಿಯಲ್ಲಿ ಜಯಂತ್ ಟಿ, ರೀನಾ ಸೇರಿದಂತೆ ಬೆಂಗಳೂರು ಮತ್ತು ಮಂಗಳೂರಿನ ಕೆಲವು ವ್ಯಕ್ತಿಗಳು ಕೊಡಗು ಜಿಲ್ಲೆಯ ವಿರಾಜಪೇಟೆ, ಶುಂಠಿಕೊಪ್ಪ ಕುಶಾಲನಗರ ವ್ಯಾಪ್ತಿಯಲ್ಲಿ ಸಭೆಗಳನ್ನು ನಡೆಸಿದ್ದರು. ಅಷ್ಟೇ ಅಲ್ಲದೇ ಕ್ಷೇತ್ರ ಗ್ರಾಮೀಣಾಭಿವೃದ್ಧಿ ಯೋಜನೆಯ ಮಹಿಳಾ ಸದಸ್ಯರನ್ನು ಭೇಟಿ ಮಾಡಿ ಅವರ ಮೂಲಕ ಕೆಲವು ಕಪೋಲ ಕಲ್ಪಿತ ದೂರುಗಳನ್ನು ಪಡೆದು ಪೊಲೀಸ್ ಠಾಣೆಗೆ ನೀಡುವಲ್ಲಿ ಬಹುತೇಕ ಯಶಸ್ವಿಯಾಗಿದ್ದರು. ವಿರಾಜಪೇಟೆ ಶುಂಠಿಕೊಪ್ಪ ಮತ್ತಿತರ ಕಡೆ ನೀಡಿರುವ ದೂರಿನಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಮತ್ತು ಯೋಜನೆಯ ವ್ಯವಸ್ಥಾಪಕ ನಿರ್ದೇಶಕ ಅನಿಲ್ ಕುಮಾರ್ ಅವರುಗಳ ಹೆಸರನ್ನು ಸಹ ಉಲ್ಲೇಖಿಸಿದ್ದರು. ಎನ್ನಲಾಗಿದೆ.
PublicNext
06/09/2025 05:22 pm