", "articleSection": "News", "image": { "@type": "ImageObject", "url": "https://prod.cdn.publicnext.com/s3fs-public/38633520250906072321filescapture.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "Suresh Gadag" }, "editor": { "@type": "Person", "name": "9113093241" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಗದಗ : ಗೌರವಾನ್ವಿತ ಸರ್ವೋಚ್ಛ ನ್ಯಾಯಾಲಯ ನವದೆಹಲಿ, ಗೌರವಾನ್ವಿತ ಕರ್ನಾಟಕ ಉಚ್ಛ ನ್ಯಾಯಾಲಯ, ಬೆಂಗಳೂರು ಹಾಗೂ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ...Read more" } ", "keywords": "Node", "url": "https://dashboard.publicnext.com/node" }
ಗದಗ : ಗೌರವಾನ್ವಿತ ಸರ್ವೋಚ್ಛ ನ್ಯಾಯಾಲಯ ನವದೆಹಲಿ, ಗೌರವಾನ್ವಿತ ಕರ್ನಾಟಕ ಉಚ್ಛ ನ್ಯಾಯಾಲಯ, ಬೆಂಗಳೂರು ಹಾಗೂ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಬೆಂಗಳೂರು ಇವರ ಆದೇಶದನ್ವಯ ಗದಗ ಜಿಲ್ಲೆಯಲ್ಲಿ ದಿಃ13-09-2025 ರಂದು ರಾಷ್ಟೀಯ ಲೋಕ ಅದಾಲತ್ ಹಮ್ಮಿಕೊಂಡಿದ್ದು ಸಾರ್ವಜನಿಕರು, ಪಕ್ಷಗಾರರು ತಮ್ಮ ವ್ಯಾಜ್ಯಗಳನ್ನು ಪರಸ್ಪರ ರಾಜೀ ಸಂಧಾನ ಮಾಡಿಕೊಳ್ಳುವ ಮೂಲಕ ತಮ್ಮ ಪ್ರಕರಣಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಿಕೊಳ್ಳಲು ಇದೊಂದು ಸುವರ್ಣಾವಕಾಶವಾಗಿದೆ. ರಾಜೀ ಸಂಧಾನದಲ್ಲಿ ಪಾಲ್ಗೊಂಡು ತಮಗಾಗುವ ಆರ್ಥಿಕ ಹೊರೆ ಹಾಗೂ ಸಮಯ ಪೋಲಾಗುವುದನ್ನು ತಪ್ಪಿಸಲು, ಮತ್ತು ರಾಜಿ ಸಂಧಾನದಲ್ಲಿ ಪ್ರಕರಣ ಇತ್ಯರ್ಥವಾದರೆ ನ್ಯಾಯಾಲಯಕ್ಕೆ ತುಂಬಿದ ಶುಲ್ಕವನ್ನು ಸಂಪೂರ್ಣ ಮರುಪಾವತಿ ಮಾಡಲಾಗುವುದು ಹಾಗೂ ಪ್ರಕರಣ ರಾಜೀ ಆದಲ್ಲಿ ಉಭಯ ಪಕ್ಷಗಾರರಿಗೆ ಮೇಲ್ಮನವಿ ಸಲ್ಲಿಸಲು ಅವಕಾಶವಿರುವುದಿಲ್ಲ ಇಲ್ಲಿಗೆ ಪ್ರಕರಣ ಮುಕ್ತಾಯಗೊಂಡು ತಮ್ಮ ಮೊದಲಿನ ಬಾಂದsವ್ಯ ಉಳಿಸಿಕೊಳ್ಳಲು ಸಹಾಯಕವಾಗುತ್ತದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಪ್ರಭಾರ ಅಧ್ಯಕ್ಷರಾದ ಗಂಗಾಧರ ಸಿ.ಎಮ್ ಅವರು ತಿಳಿಸಿದರು.
ನಗರದ ಜಿಲ್ಲಾ ನ್ಯಾಯಾಲಯದಲ್ಲಿ ಶನಿವಾರ ಜರುಗಿದ ಪತ್ರಿಕಾಗೋಷ್ಟಿಯನ್ನುದ್ದೇಶಿ ಅವರು ಮಾತನಾಡಿದರು. ಗದಗ ಜಿಲ್ಲೆಯಲ್ಲಿ ರಾಜೀ ಸಂಧಾನಕ್ಕಾಗಿ ಪ್ರತಿಯೊಂದು ನ್ಯಾಯಾಲಯಕ್ಕೆ ಒಂದು ಬೆಂಚಿನಂತೆ ಒಟ್ಟು 15 ಬೆಂಚಗಳನ್ನು ರಚಿಸಿದ್ದು ಗದಗ ಜಿಲ್ಲೆಯಲ್ಲಿ ಒಟ್ಟು 20505 ವಿವಿಧ ಚಾಲ್ತಿ ಪ್ರಕರಣಗಳಿದ್ದು ಅದರಲ್ಲಿ ಈಗಾಗಲೇ ರಾಜೀ ಆಗಬಹುದಾದ 2678 ಪ್ರಕರಣಗಳನ್ನು ಗುರುತಿಸಿದ್ದು ಇದರಲ್ಲಿ ಸಿವಿಲ್ ದಾವೆಗಳು ಅಂದರೆ ಜಮೀನುಗಳಿಗೆ ಸಂಬಂಧಪಟ್ಟ ವ್ಯಾಜ್ಯಗಳು ಮನೆ ಹಾಗೂ ನಿವೇಶನಗಳಿಗೆ ಸಂಬಂಧಪಟ್ಟ ವ್ಯಾಜ್ಯಗಳು, ಸ್ವಾಧೀನ ಪ್ರಕರಣಗಳು, ಬ್ಯಾಂಕ ವಸೂಲಾತಿ ಪ್ರಕರಣಗಳು, ದರಖಾಸ್ತು ಅರ್ಜಿಗಳು, ಕಾರ್ಮಿಕ ಪ್ರಕರಣಗಳು, ಮರಳು ಕಳ್ಳ ಸಾಗಾಣಿಕೆ ಪ್ರಕರಣಗಳು, ಚೆಕ್‌ಬೌನ್ಸ್ ಪ್ರಕರಣಗಳು, ಮೋಟರ್ ವಾಹನ ಅಪಘಾತ ಪ್ರಕರಣಗಳು, ವೈವಾಹಿಕ ಪ್ರಕರಣಗಳು ಹಾಗೂ ರಾಜೀ ಆಗಲು ಅರ್ಹವಿರುವ ಕ್ರಿಮಿನಲ್ ಕಂಪೌಂಡೆಬಲ್ ಪ್ರಕರಣಗಳು ಸೇರಿದಂತೆ ಹಲವಾರು ಪ್ರಕರಣಗಳನ್ನು ರಾಜೀಗಾಗಿ ಗುರುತಿಸಲಾಗಿರುತ್ತದೆ.
Kshetra Samachara
06/09/2025 07:23 pm