ಚಿತ್ರದುರ್ಗ :ಜಿಲ್ಲಾ ಆಸ್ಪತ್ರೆ ಸಿಬ್ಬಂದಿ ಸಾಮೂಹಿಕವಾಗಿ ರಜೆ ತೆರಳಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಸಂಬಂದಪಟ್ಟ ಅಧಿಕಾರಿಗಳಿಂದ ವರದಿ ಪಡೆದು ಕೂಲಂಕಷವಾಗಿ ಪರಿಶೀಲನೆ ನಡೆಸುವಂತೆ ಜಿಲ್ಲಾಧಿಕಾರಿ ಹಾಗೂ ಜಿ.ಪಂ. ಸಿಇಓ ಅವರಿಗೆ ಸೂಚಿಸಿದ್ದೇನೆ. ವರದಿ ಆಧರಿಸಿ ಕಠಿಣ ಕ್ರಮ ಕೈಗೊಳ್ಳುವುದಾಗಿ ಯೋಜನೆ ಮತ್ತು ಸಾಂಖ್ಯಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಹೇಳಿದರು/ಜಿಲ್ಲಾ ಆಸ್ಪತ್ರೆ ಸಿಬ್ಬಂದಿ ಸಾಮೂಹಿಕವಾಗಿ ರಜೆ ಪಡೆದು ಪ್ರವಾಸ ತೆರಳಿದ ಕುರಿತು ಮಾಧ್ಯಮಗಳಲ್ಲಿ ವರದಿ ಬಿತ್ತರವಾದ ಹಿನ್ನಲೆಯಲ್ಲಿ, ಶನಿವಾರ ಜಿಲ್ಲಾ ಆಸ್ಪತ್ರೆಗೆ ಅನಿರೀಕ್ಷಿತ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.
ಸಿಬ್ಬಂದಿಗಳಿಗೆ ರಜೆ ನೀಡಿ ಜಿಲ್ಲಾಶಸ್ತ್ರ ಚಿಕಿತ್ಸಕರು ಆಡಳಿತದಲ್ಲಿ ಎಡವಿದ್ದಾರೆ. 15 ಸಿಬ್ಬಂದಿಗಳ ಪೈಕಿ 8 ಜನರಿಗೆ ರಜೆ ನೀಡಿದ್ದಾರೆ. ಹಾಜರಾತಿ, ರಜೆ ಅರ್ಜಿ ಸೇರಿದಂತೆ ವಿವಿಧ ದಾಖಲೆಗಳನ್ನು ಪರಿಶೀಲನೆಗೆ ನೀಡುವಂತೆ ಜಿಲ್ಲಾ ಶಸ್ತ್ರ ಚಿಕಿತ್ಸಕರಿಗೆ ತಿಳಿಸಲಾಗಿದೆ. ತಪ್ಪಿತಸ್ಥರ ವಿರುದ್ದ ನೂರಕ್ಕೆ ನೂರಷ್ಟು ಕಠಿಣ ಕ್ರಮ ಕೈಗೊಳ್ಳಲಾಗುವುದು. ಪ್ರಕರಣದಲ್ಲಿ ಯಾರನ್ನೂ ರಕ್ಷಿಸುವ ಪ್ರಮೇಯವಿಲ್ಲ. ಸೇವಾ ಮನೋಭಾವದ ವೈದ್ಯರು ಜಿಲ್ಲೆಗೆ ಬೇಕು. ಜನರಿಗೆ ಸರಿಯಾದ ರೀತಿಯಲ್ಲಿ ಉತ್ತಮ ಚಿಕಿತ್ಸೆ ದೊರೆಯಬೇಕು ಎಂಬುದು ಸರ್ಕಾರದ ಆಶಯವಾಗಿದೆ ಎಂದರು.
Kshetra Samachara
06/09/2025 07:26 pm