ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮೂಡಿಗೆರೆ: ಬಿಎಸ್‌ಎನ್‌ಎಲ್ ಮೊಬೈಲ್ ಟವರ್ ಕಾಮಗಾರಿ ತ್ವರಿತಗೊಳಿಸಿ: ಸಂಸದ ಕೋಟ ಸೂಚನೆ

ಮೂಡಿಗೆರೆ: ಜಿಲ್ಲೆಗೆ ಮಂಜೂರಾಗಿರುವ ಬಿಎಸ್‌ಎನ್‌ಎಲ್ ಮೊಬೈಲ್ ಟವರ್ ನಿರ್ಮಾಣ ಕಾಮಗಾರಿಯನ್ನು ತ್ವರಿತಗೊಳಿಸಬೇಕು ಎಂದು ರಾಜ್ಯಸಭಾ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಸೂಚಿಸಿದರು. ಮೂಡಿಗೆರೆ ತಾಲ್ಲೂಕಿನ ತ್ರಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೂಲರಹಳ್ಳಿ ಗ್ರಾಮದಲ್ಲಿ ನಿರ್ಮಾಣವಾಗುತ್ತಿರುವ ಬಿಎಸ್‌ಎನ್‌ಎಲ್ ಮೊಬೈಲ್ ಟವರ್ ಕಾಮಗಾರಿ ವೀಕ್ಷಿಸಿದ ಅವರು ಜಿಲ್ಲೆಯ ಹಲವೆಡೆಗಳಿಂದ ನೆಟ್‌ವರ್ಕ್ ಸಮಸ್ಯೆಗಳ ಕುರಿತು ದೂರುಗಳು ಬಂದಿವೆ. ಅದನ್ನು ಗಮನಿಸಿ ಬಿಎಸ್‌ಎನ್‌ಎಲ್ ಸಂಸ್ಥೆಯ ಮೂಲಕ ಮೊಬೈಲ್ ಟವರ್ ನಿರ್ಮಾಣಕ್ಕೆ ಯೋಜನೆ ರೂಪಿಸಲಾಗಿದೆ. ಕಾಮಗಾರಿ ಶೀಘ್ರದಲ್ಲಿ ಪೂರ್ಣಗೊಳ್ಳುವುದರಿಂದ ಗ್ರಾಮೀಣ ಭಾಗದ ಜನರಿಗೆ ಉತ್ತಮ ನೆಟ್‌ವರ್ಕ್ ಸೌಲಭ್ಯ ದೊರೆಯಲಿದೆ" ಎಂದು ತಿಳಿಸಿದ್ದಾರೆ.

Edited By : PublicNext Desk
Kshetra Samachara

Kshetra Samachara

06/09/2025 08:48 pm

Cinque Terre

840

Cinque Terre

0

ಸಂಬಂಧಿತ ಸುದ್ದಿ