ಶ್ರೀನಿವಾಸಪುರ - ಸೀಮೆಎಣ್ಣೆ ಸುರಿದುಕೊಂಡು ತಾಯಿ,ಮಗ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಅರಿಕೆರೆಯಲ್ಲಿ ನಡೆದಿದೆ. ಅರಿಕೆರೆ ಗ್ರಾಮದ ಬಳಿಯ ಕೋಳಿ ಫಾರಂನಲ್ಲಿ ತಾಯಿ-ಮಗ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಾಯಿ ರಶ್ಮಿಪ್ರಿಯ (34) ಹಾಗೂ ಪ್ರಭಾತ್ (7) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ. ಘಟನೆ ಸಂಬಂಧ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪತಿ ದೀಪಕ್‌ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಶ್ರೀನಿವಾಸಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
PublicNext
06/09/2025 08:48 pm