", "articleSection": "Cultural Activity", "image": { "@type": "ImageObject", "url": "https://prod.cdn.publicnext.com/s3fs-public/286525-1757178098-WhatsApp-Image-2025-09-06-at-10.31.30-PM.jpeg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "ShivakumarChikkaballapur" }, "editor": { "@type": "Person", "name": "shivuk" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಶಿಡ್ಲಘಟ್ಟ : ನಮ್ಮ ಭಾರತ ದೇಶದ ನಿಜವಾದ ಸಂಪತ್ತು ಶಿಕ್ಷಕರು. ಈ ಶಿಕ್ಷಕರಿಗೆ ಪ್ರತಿಯೊಬ್ಬ ಜನಪ್ರತಿನಿಧಿ ಅವರಿಗೆ ಮೊದಲ ಆದ್ಯತೆ ನೀಡಬೇಕು ಎಂದು ...Read more" } ", "keywords": "Chikkaballapur education priority, education development initiatives, education infrastructure improvement, quality education focus, government schemes for education, education awareness programs, Chikkaballapur MLA's vision for education.", "url": "https://dashboard.publicnext.com/node" } ಚಿಕ್ಕಬಳ್ಳಾಪುರ: ನನ್ನ ಅಧಿಕಾರ ಅವಧಿಯಲ್ಲಿ ಶಿಕ್ಷಣಕ್ಕೆ ಹೆಚ್ಚು ಆದ್ಯತೆ
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಿಕ್ಕಬಳ್ಳಾಪುರ: ನನ್ನ ಅಧಿಕಾರ ಅವಧಿಯಲ್ಲಿ ಶಿಕ್ಷಣಕ್ಕೆ ಹೆಚ್ಚು ಆದ್ಯತೆ

ಶಿಡ್ಲಘಟ್ಟ : ನಮ್ಮ ಭಾರತ ದೇಶದ ನಿಜವಾದ ಸಂಪತ್ತು ಶಿಕ್ಷಕರು. ಈ ಶಿಕ್ಷಕರಿಗೆ ಪ್ರತಿಯೊಬ್ಬ ಜನಪ್ರತಿನಿಧಿ ಅವರಿಗೆ ಮೊದಲ ಆದ್ಯತೆ ನೀಡಬೇಕು ಎಂದು ಶಾಸಕ ಬಿ.ಎನ್ ರವಿಕುಮಾರ್ ಅಭಿಪ್ರಾಯಪಟ್ಟರು.

ತಾಲೂಕಿನ ಹಂಡಿಗನಾಳದ ಬಾಲಾಜಿ ಕನ್ವೆನ್ಷನ್ ಹಾಲ್ ನಲ್ಲಿ ಶನಿವಾರ ಹಮ್ಮಿಕೊಂಡಿದ್ದ ಭಾರತ ರತ್ನ ಡಾ. ಎಸ್ ರಾಧಾಕೃಷ್ಣನ್ ರವರ ಜನ್ಮದಿನಾಚರಣೆ ಹಾಗೂ ಶಿಕ್ಷಕರ ದಿನಾಚರಣೆಯ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ನಮ್ಮ ಅಧಿಕಾರ ಅವಧಿಯಲ್ಲಿ ಶಿಕ್ಷಣಕ್ಕೆ ಹೆಚ್ಚು ಆದ್ಯತೆ ನೀಡುತ್ತಿದ್ದೇವೆ. ಏಕೆಂದರೆ ನಮ್ಮ ಕ್ಷೇತ್ರ ಆರ್ಥಿಕವಾಗಿ ಶೈಕ್ಷಣಿಕವಾಗಿ ಬಹಳ ಹಿಂದುಳಿದಿರುವುದರಿಂದ ನಾವು ಶಿಕ್ಷಣಕ್ಕೆ ಆದ್ಯತೆ ಕೊಡಲು ತೀರ್ಮಾನ ಮಾಡಿದ್ದು, ಈ ಕ್ಷೇತ್ರದಲ್ಲಿ ಒಬ್ಬ ಸಾಮಾನ್ಯ ವ್ಯಕ್ತಿ ಶಾಸಕನಾಗಲು ಕಾರಣ ನಮ್ಮ ಗುರುಗಳು ದೇವೇಗೌಡರು ಎಂದು ಹೇಳಲು ಬಯಸುತ್ತೇನೆ. ಪ್ರತಿಯೊಬ್ಬ ವ್ಯಕ್ತಿಯು ಹುಟ್ಟು ಸಾವು ಖಚಿತ ಆದರೆ ಅದರ ಮಧ್ಯೆ ನಾವು ಮಾಡುವ ಕೆಲಸ ಶಾಶ್ವತವಾಗಿರಬೇಕೆಂದರು.

ನಮ್ಮ ಕ್ಷೇತ್ರದಲ್ಲಿ 17 ಸರ್ಕಾರಿ ಪ್ರೌಢಶಾಲೆಗಳಿದ್ದು ಅದರಲ್ಲಿ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ಮೊದಲ ವಿದ್ಯಾರ್ಥಿಗೆ ಶಾಸಕರ ನಿಧಿಯಿಂದ ಒಂದು ಲಕ್ಷ ಬಹುಮಾನ, ದ್ವಿತೀಯ ಸ್ಥಾನ ಪಡೆದವರಿಗೆ 50 ಸಾವಿರ, ತೃತೀಯ ಸ್ಥಾನ ಪಡೆದವರಿಗೆ 25 ಸಾವಿರ ಬಹುಮಾನ ಈಗಾಗಲೇ ಘೋಷಿಸಿದ್ದು, ಈ ಶಿಕ್ಷಕರ ದಿನಾಚರಣೆ ಪ್ರಯುಕ್ತ 17 ಸರ್ಕಾರಿ ಪ್ರೌಢಶಾಲೆಗಳಲ್ಲಿ ಅತಿ ಹೆಚ್ಚು ಅಂಕ ಪಡೆದ ಶಾಲೆಯ ಶಿಕ್ಷಕರಿಗೆ ಮುಂದಿನ ಶಿಕ್ಷಕರ ದಿನಾಚರಣೆಯಲ್ಲಿ ಅವರಿಗೆ ಸೂಕ್ತ ಬಹುಮಾನ ನೀಡಲಾಗುವುದೆಂದು ಘೋಷಿಸಿದರು.

Edited By : Shivu K
PublicNext

PublicNext

06/09/2025 10:47 pm

Cinque Terre

28.39 K

Cinque Terre

0

ಸಂಬಂಧಿತ ಸುದ್ದಿ