", "articleSection": "Politics", "image": { "@type": "ImageObject", "url": "https://prod.cdn.publicnext.com/s3fs-public/videos/thumbnails/457940_1757203475_output_thumbnail.png", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "RohitMadakeri" }, "editor": { "@type": "Person", "name": "9535981195" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಮಡಿಕೇರಿ: ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿ ವ್ಯಾಪಕ ಮಳೆೆಯಿಂದ ಕಾಫಿ ಸೇರಿದಂತೆ ವಿವಿಧ ಕೃಷಿಗಳಿಗೆಅಪಾರ ಹಾನಿಯಾಗಿದ್ದು, ಜಿಲ್ಲಾ ಬಿಜೆಪಿ ಸೆಪ್ಟೆ...Read more" } ", "keywords": "Node", "url": "https://dashboard.publicnext.com/node" }
ಮಡಿಕೇರಿ: ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿ ವ್ಯಾಪಕ ಮಳೆೆಯಿಂದ ಕಾಫಿ ಸೇರಿದಂತೆ ವಿವಿಧ ಕೃಷಿಗಳಿಗೆಅಪಾರ ಹಾನಿಯಾಗಿದ್ದು, ಜಿಲ್ಲಾ ಬಿಜೆಪಿ ಸೆಪ್ಟೆಂಬರ್ 9 ರಂದು ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆಹಾನಿ ಸಮೀಕ್ಷೆ ನಡೆಸಲಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ನಾಪಂಡ ರವಿ ಕಾಳಪ್ಪ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ಕಾಂಗ್ರೆಸ್ ಸರ್ಕಾರ ಬೆಳೆಹಾನಿ ಬಗ್ಗೆ ಕನಿಷ್ಟ ಕಾಳಜಿಯನ್ನು ತೋರದ ಕಾರಣ ಬಿಜೆಪಿ ಹಾನಿಯನ್ನು ಪರಿಶೀಲಿಸಿ, ವರದಿ ತಯಾರಿಸಿ ಸಂಸದರ ಮೂಲಕ ಕೇಂದ್ರ ಸರ್ಕಾರಕ್ಕೆ ಹಾಗೂ ಜಿಲ್ಲಾಧಿಕಾರಿಗಳಿಗೆ ಸಲ್ಲಿಸಲಿದೆ ಎಂದು ತಿಳಿಸಿದರು.
ಅತೀ ಹೆಚ್ಚು ಮಳೆಯಾಗಿರುವ ತೋಳೂರು ಶೆಟ್ಟಳ್ಳಿ, ಶಾಂತಳ್ಳಿ, ಬೆಟ್ಟದಳ್ಳಿ, ಹಮ್ಮಿಯಾಲ, ಮುಟ್ಲು, ಮುಕ್ಕೋಡ್ಲು, ಕಾಲೂರು, ಗಾಳಿಬೀಡು, ಬೆಟ್ಟಗೇರಿ, ಚೇರಂಬಾಣೆ, ಚೆಟ್ಟಿಮಾನಿ, ಭಾಗಮಂಡಲ, ಬಲ್ಲಮಾವಟಿ, ಕಕ್ಕಬ್ಬೆ ವಿಭಾಗಗಳಿಗೆ ಪಕ್ಷದ ಸಮೀಕ್ಷಾ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಲಿದೆ. ಭಾರಿ ಮಳೆಗೆ ಕೊಡಗಿನಲ್ಲಿ ಬೆಳೆಹಾನಿಯಾಗಿದ್ದು ಹೀಗಿದ್ದೂ ಈ ಬಗ್ಗೆ ಜಿಲ್ಲೆಯ ಶಾಸಕರಾಗಲಿ, ಉಸ್ತುವಾರಿ ಸಚಿವರಾಗಲಿ ಹೆಚ್ಚಿನ ಕಾಳಜಿ ವಹಿಸಿಲ್ಲವೆಂದು ಆರೋಪಿಸಿ, ಪ್ರಸ್ತುತ ಪರಿಸ್ಥಿಗಳ ನಡುವೆ ಬೆಳೆಗಾರಿಗೆ ತಲಾ 2 ಲಕ್ಷ ಪರಿಹಾರವನ್ನಾದರು ನೀಡಬೇಕೆಂದು ಆಗ್ರಹಿಸಿದರು.
Kshetra Samachara
07/09/2025 05:34 am