ಹಾಸನ: ಮುಂದಿನ ಒಂದು ವರ್ಷದೊಳಗೆ ನಗರದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ರೋಗಿಗಳ ಸೇವೆ ಆರಂಭಿಸಲು ಎಲ್ಲ ರೀತಿಯ ಪ್ರಯತ್ನಗಳನ್ನು ಮಾಡಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣಭೈರೇಗೌಡ ತಿಳಿಸಿದ್ದಾರೆ.
ಶನಿವಾರ ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳೊಂದಿಗೆ ಆಸ್ಪತ್ರೆ ಕಟ್ಟಡಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ನಂತರ ಅವರು ಮಾತನಾಡಿದರು.
2018ರಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಕಾಮಗಾರಿ ಆರಂಭಗೊಂಡಿದ್ದರೂ, 2022ರಲ್ಲಿ ಅನುದಾನದ ಕೊರತೆಯಿಂದ ನಿರ್ಮಾಣ ಕಾರ್ಯ ನಿಂತು ಹೋಗಿತ್ತು. ಕಟ್ಟಡ ಪೂರ್ಣಗೊಳ್ಳಲು ಅಗತ್ಯವಾಗಿದ್ದ ಹೆಚ್ಚುವರಿ ₹9 ಕೋಟಿ ಅನುದಾನ ಬಿಡುಗಡೆಯಾಗಿರಲಿಲ್ಲ. ಹೆಚ್ಚುವರಿ ಅನುದಾನಕ್ಕಾಗಿ ಪ್ರಸ್ತಾವನೆ ಸಲ್ಲಿಸಿದ್ದರೂ ಹಣ ಬಿಡುಗಡೆ ಆಗದೆ ಕಾಮಗಾರಿ ಅಪೂರ್ಣವಾಗಿತ್ತು ಎಂದು ಸಚಿವರು ವಿವರಿಸಿದರು.
PublicNext
07/09/2025 08:11 am