", "articleSection": "Politics,Government", "image": { "@type": "ImageObject", "url": "https://prod.cdn.publicnext.com/s3fs-public/41829720250907083953filescapture.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "ShirahattiGowrish" }, "editor": { "@type": "Person", "name": "9739386670" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಶಿರಹಟ್ಟಿ: ನಿವೃತ್ತ ನ್ಯಾ. ನಾಗಮೋಹನ ದಾಸ್ ಆಯೋಗ ಸರ್ಕಾರಕ್ಕೆ ಸಲ್ಲಿಸಿರುವ ವರದಿಯು ಅವೈಜ್ಞಾನಿಕವಾಗಿದೆ. ಇಂದಿನ ರಾಜ್ಯ ಸರಕಾರವು ನಮ್ಮ ಬಂಜಾರ ...Read more" } ", "keywords": "Banjara Samaj protest, Bengaluru Chalo September 10, Shirahatti news, Karnataka protests, Banjara community rally, Bengaluru rally, social movement Karnataka, community rights protest" Given the context of similar protests in Karnataka, additional relevant keywords could be, ", "url": "https://dashboard.publicnext.com/node" } ಶಿರಹಟ್ಟಿ: ಸೆಪ್ಟೆಂಬರ್‌ 10 ಬಂಜಾರ ಸಮಾಜದಿಂದ ಬೆಂಗಳೂರು ಚಲೋ
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಶಿರಹಟ್ಟಿ: ಸೆಪ್ಟೆಂಬರ್‌ 10 ಬಂಜಾರ ಸಮಾಜದಿಂದ ಬೆಂಗಳೂರು ಚಲೋ

ಶಿರಹಟ್ಟಿ: ನಿವೃತ್ತ ನ್ಯಾ. ನಾಗಮೋಹನ ದಾಸ್ ಆಯೋಗ ಸರ್ಕಾರಕ್ಕೆ ಸಲ್ಲಿಸಿರುವ ವರದಿಯು ಅವೈಜ್ಞಾನಿಕವಾಗಿದೆ. ಇಂದಿನ ರಾಜ್ಯ ಸರಕಾರವು ನಮ್ಮ ಬಂಜಾರ (ಲಂಬಾಣಿ) ಸಮುದಾಯಕ್ಕೆ ಬಹಳ ದೊಡ್ಡ ಅನ್ಯಾಯ ಮಾಡಿದೆ. ಇದನ್ನು ಕೂಡಲೇ ಸರಿಪಡಿಸಿ ನ್ಯಾಯ ಒದಗಿಸಿಕೊಡಬೇಕು ಎಂದು ಆಗ್ರಹಿಸಿ ಸರ್ಕಾರದ ವಿರುದ್ಧ ಸೆಪ್ಟೆಂಬರ್‌ 10ರಂದು ಬೆಂಗಳೂರ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಶಾಸಕ ಡಾ. ಚಂದ್ರು ಲಮಾಣಿ ಹೇಳಿದರು.

ಹೌದು... ಶನಿವಾರ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು. ಪರಿಶಿಷ್ಟಜಾತಿಯಲ್ಲಿ ಒಳಮೀಸಲಾತಿಯನ್ನು ಸರ್ಕಾರ ಅನುಷ್ಠಾನಕ್ಕೆ ತಂದಿದೆ. 101 ಜಾತಿಗಳನ್ನು ಮೂರು ಗುಂಪುಗಳಾಗಿ ವಿಂಗಡಿಸಿ ಮೀಸಲಾತಿ ವರ್ಗೀಕರಣ ಮಾಡಲಾಗಿದೆ. ಬಂಜಾರ ಸೇರಿದಂತೆ ಕೊರಮ, ಕೊರಚ, ಬೋವಿ ಜಾತಿಗಳಿಗೆ ಇದರಿಂದ ಅನ್ಯಾಯವಾಗಿದೆ ಎಂದು ಹೇಳಿದರು.

ಹಿಂದಿನ ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರದ ತನ್ನ ಅವಧಿಯಲ್ಲಿ ಶೇ. 4.5ರಷ್ಟು ಮೀಸಲಾತಿ ನೀಡಲಾಗಿತ್ತು. ಈಗ ನೀಡಿರುವ ಮೀಸಲಾತಿ ವರ್ಗೀಕರಣ ಅವೈಜ್ಞಾನಿಕವಾಗಿದೆ ಎಂದು ಆರೋಪಿಸಿದರು. ಬಂಜಾರ ಸಮುದಾಯದ ಅಂಕಿ ಅಂಶ ತಪ್ಪಾಗಿದೆ. ಜಾತಿ ಗಣತಿಯಲ್ಲಿ ಕಡಿಮೆ ಜನಸಂಖ್ಯೆ ತೋರಿಸಿರುವ ಕಾರಣ ಏನು? ಈ ಬಗ್ಗೆ ಸರಿಯಾದ ಕ್ರಮದಲ್ಲಿ ಸರ್ಕಾರ ಸಮೀಕ್ಷೆ ನಡೆಸಿ ವರದಿ ಜಾರಿಗೊಳಿಸಬೇಕು ಎಂದು ಆಗ್ರಹಿಸಿದರು.

ಬೆಂಗಳೂರ ಫ್ರೀಡಂ ಪಾರ್ಕ್‌ನಲ್ಲಿ ನಡೆಯುವ ಒಳಮೀಸಲಾತಿ ಹೋರಾಟದ, ಪ್ರತಿಭಟನೆಯಲ್ಲಿ, ನಮ್ಮ ತಾಲೂಕು ಮತ್ತು ಜಿಲ್ಲೆಯಿಂದಲೂ 2 ಸಾವಿರಕ್ಕೂ ಹೆಚ್ಚು ಜನ ಹೋಗುತ್ತೇವೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಶಿವಣ್ಣ ಲಮಾಣಿ ನೆಲೋಗಲ್, ಜಾನು ಲಮಾಣಿ, ಗುರಪ್ಪ ಲಮಾಣಿ, ಪುಂಡಲೀಕ ಲಮಾಣಿ, ಆನಂದ ನಾಯಕ, ನಾನಪ್ಪ ಲಮಾಣಿ, ಈರಣ್ಣ ಚವ್ಹಾಣ, ಸೋಮಣ್ಣ ಲಮಾಣಿ, ಚಂದೆಪ್ಪ ಲಮಾಣಿ, ಕಿರಣ ಲಮಾಣಿ, ಶೇಖಪ್ಪ ಲಮಾಣಿ, ಮಲ್ಲೇಶ ಲಮಾಣಿ, ಕೃಷ್ಣಾ ಸೂರಣಗಿ, ರಮೇಶ ಲಮಾಣಿ, ಸಂತು (ಡಿಜೆ), ಸೇರಿದಂತೆ ಇನ್ನೂ ಅನೇಕರು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

07/09/2025 08:39 am

Cinque Terre

6.78 K

Cinque Terre

0

ಸಂಬಂಧಿತ ಸುದ್ದಿ