", "articleSection": "Public News", "image": { "@type": "ImageObject", "url": "https://prod.cdn.publicnext.com/s3fs-public/38659820250907084355filescapture.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "KumarTumakur" }, "editor": { "@type": "Person", "name": "9844461373" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ತುಮಕೂರು: ಕಳೆದ ವರ್ಷದಿಂದ ಅದ್ದೂರಿಯಾಗಿ ಆರಂಭಗೊಂಡಿರುವ ತುಮಕೂರು ದಸರಾ ಉತ್ಸವವನ್ನು ಈ ಬಾರಿಯೂ ವಿಜೃಂಭಣೆಯಿಂದ ಆಚರಿಸಲು ಸಕಲ ಸಿದ್ಧತೆಗಳು ಭರ...Read more" } ", "keywords": "dasara, ", "url": "https://dashboard.publicnext.com/node" }
ತುಮಕೂರು: ಕಳೆದ ವರ್ಷದಿಂದ ಅದ್ದೂರಿಯಾಗಿ ಆರಂಭಗೊಂಡಿರುವ ತುಮಕೂರು ದಸರಾ ಉತ್ಸವವನ್ನು ಈ ಬಾರಿಯೂ ವಿಜೃಂಭಣೆಯಿಂದ ಆಚರಿಸಲು ಸಕಲ ಸಿದ್ಧತೆಗಳು ಭರದಿಂದ ನಡೆದಿದ್ದು, ಇದಕ್ಕೆ ಪೂರ್ವಭಾವಿಯಾಗಿ ತುಮಕೂರು ಮಹಾನಗರಪಾಲಿಕೆ ಸಭಾಂಗಣದಲ್ಲಿ ಮಹಾನಗರಪಾಲಿಕೆ ಆಯುಕ್ತರು ಹಾಗೂ ಆಹಾರ ಮತ್ತು ವಸತಿ ಸಮಿತಿ ಅಧ್ಯಕ್ಷರಾದ ಬಿ.ವಿ.ಅಶ್ವಿಜ ಅಧ್ಯಕ್ಷತೆಯಲ್ಲಿ ಆಹಾರ ಸಮಿತಿ ಸಭೆಯನ್ನು ಆಯೋಜಿಸಲಾಗಿತ್ತು.
ದಸರಾದಲ್ಲಿ ಪ್ರಮುಖ ಆಕರ್ಷಣೆ ಎಂದರೆ ಆಹಾರ ಮೇಳ. ಪ್ರಸಕ್ತ ಸಾಲಿನಲ್ಲಿ ಆಹಾರ ಮೇಳವನ್ನು ಅದ್ದೂರಿಯಾಗಿ ಆಯೋಜಿಸಲು ಚಟುವಟಿಕೆ ಆರಂಭವಾಗಿದ್ದು, ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ, ತುಮಕೂರು ದಸರಾ ಮಹೋತ್ಸವ ಆಹಾರ ಮೇಳ ಉಪಸಮಿತಿಯು ಮೇಳವನ್ನು ಸೆಪ್ಟೆಂಬರ್ 27 ರಿಂದ ಅಕ್ಟೋಬರ್ 2 ರವರೆಗೆ 6 ದಿನಗಳ ಕಾಲ ನಡೆಸಲು ರೂಪು-ರೇಷೆಗಳನ್ನು ಸಿದ್ಧಗೊಳಿಸಲಾಗುತ್ತಿದೆ ಎಂದು ಆಯುಕ್ತ ಬಿ.ವಿ.ಅಶ್ವಿಜ ಹೇಳಿದರು.
ನಗರದ ಜೂನಿಯರ್ ಕಾಲೇಜು ಮೈದಾನದಲ್ಲಿ ನಡೆಯಲಿರುವ ಆಹಾರ ಮೇಳದಲ್ಲಿ ಬಗೆ ಬಗೆಯ ಖಾದ್ಯಗಳನ್ನ ಸಾರ್ವಜನಿಕರು ಸವಿಯಬಹುದಾಗಿದೆ. ಆಹಾರ ಮೇಳದಲ್ಲಿ ದೇಶೀಯ ಆಹಾರ ಪದ್ಧತಿಯ ಜೊತೆಗೆ ಪ್ರಾದೇಶಿಕ ಮತ್ತು ಹೊರ ರಾಜ್ಯಗಳ ವೈವಿಧ್ಯದ ಊಟೋಪಚಾರಗಳಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು.
ಆಹಾರ ಮೇಳದಲ್ಲಿ ಶುದ್ಧ ಸಸ್ಯಾಹಾರಿಗೆ ಆದ್ಯತೆ ನೀಡಿದ್ದು, ವಿವಿಧ ಬಗೆಯ ಇಡ್ಲಿ, ಬಜ್ಜಿ, ಐಸ್‌ಕ್ರೀಂ, ಚಾಟ್ಸ್, ಅವರೆಕಾಳು, ಮ್ಯಾಂಗೋ, ಹಲಸಿನ ಮೇಳ ಸೇರಿದಂತೆ ಹತ್ತು ಹಲವು ಬಗೆಯ ಆಹಾರ ಪದಾರ್ಥಗಳು ಸಾರ್ವಜನಿಕರಿಗೆ ಲಭ್ಯವಿರುತ್ತವೆ ಎಂದರು.
ಸೆ.27 ರಂದು ಬೆಳಿಗ್ಗೆ ಆಹಾರ ಮೇಳ ಉದ್ಧಾಟನೆಗೊಳ್ಳಲಿದ್ದು, ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಮೈದಾನದಲ್ಲಿ ಅಚ್ಚುಕಟ್ಟಾಗಿ ನಿರ್ವಹಣೆ ಮಾಡಲು ಆಹಾರ ಸಮಿತಿ ಮುಖ್ಯಸ್ಥರು ಹಾಗೂ ಸದಸ್ಯರಿಗೆ ಸೂಚಿಸಿದರು.
ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ ಜಂಟಿ ನಿರ್ದೇಶಕಿ ಸೌಮ್ಯ ಮಾತನಾಡಿ, ಈ ಬಾರಿಯ ತುಮಕೂರು ದಸರಾ ಉತ್ಸವದಲ್ಲಿ ಆಹಾರ ಮೇಳ ಆಕರ್ಷಣೆಯಾಗಲಿದೆ ಎಂದು ತಿಳಿಸಿದರು.
ಸಭೆಯಲ್ಲಿ ಸಮಿತಿ ಸದಸ್ಯರಾದ ರವೀಂದ್ರನಾಥ್ ಹೊನ್ನೂರು, ಪಿ.ಎಸ್. ಮಲ್ಲಿಕಾರ್ಜುನಸ್ವಾಮಿ, ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ, ಪಾಲಿಕೆ, ಬಿಸಿಎಂ, ಪರಿಶಿಷ್ಟ ವರ್ಗಗಳ ಇಲಾಖೆ, ಆಹಾರ ಗುಣಮಟ್ಟ ಪ್ರಾಧಿಕಾರದ ಅಂಕಿತ ಅಧಿಕಾರಿಗಳು, ಮತ್ತಿತರರು ಭಾಗವಹಿಸಿದ್ದರು.
Kshetra Samachara
07/09/2025 08:44 am