ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೊಳ್ಳೇಗಾಲ :ಪಾದಾಚಾರಿಗಳಿಗೆ ಬೈಕ್ ಡಿಕ್ಕಿ - ನಾಲ್ವರಿಗೆ ಗಾಯ

ಚಾಮರಾಜನಗರ : ಕೊಳ್ಳೇಗಾಲ ತಾಲೂಕಿನ ಚೆಲುವನಹಳ್ಳಿ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಪಾದಚಾರಿಗಳಿಗೆ ಬೈಕ್ ಡಿಕ್ಕಿಯಾಗಿ ಸವಾರ ಸೇರಿದಂತೆ ನಾಲ್ವರು ಗಾಯಗೊಂಡ ಘಟನೆ ನಡೆದಿದೆ.

ಚೆಲುವನಹಳ್ಳಿ ಗ್ರಾಮದ ಚಿಕ್ಕಬಸವಣ್ಣ, ರೇವಮ್ಮ, ಬೇಬಿಯಮ್ಮ, ಬೈಕ್‌ ಸವಾರ ರಮೇಶ್ ಗಾಯಗೊಂಡವರು. ಮೈಸೂರಿನಲ್ಲಿ ಸಂಬಂಧಿಕರ ಮದುವೆ ಕಾರ್ಯ ಮುಗಿಸಿಕೊಂಡು ಸರಗೂರಿನ ಬಳಿ ಬಸ್ಸನಿಂದಿಳಿದು ರಸ್ತೆಬದಿ ನಡೆದುಕೊಂಡು ಹೋಗುತ್ತಿದ್ದಾಗ ಹನೂರು ಕಡೆಯಿಂದ ಬಂದ ಬೈಕ್ ಡಿಕ್ಕಿಯಾಗಿದೆ.

ಗಾಯಾಳುಗಳನ್ನು ಕೊಳ್ಳೇಗಾಲ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

Edited By : PublicNext Desk
Kshetra Samachara

Kshetra Samachara

07/09/2025 01:17 pm

Cinque Terre

4.18 K

Cinque Terre

0