", "articleSection": "Government", "image": { "@type": "ImageObject", "url": "https://prod.cdn.publicnext.com/s3fs-public/41631820250907014410filescapture.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "Divakar Siddapur" }, "editor": { "@type": "Person", "name": "7022522554" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಸಿದ್ದಾಪುರ : ತಾಲೂಕು ಆಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಪಟ್ಟಣ ಪಂಚಾಯತ್, ತಾಲೂಕ ಪಂಚಾಯತ್ ಹಾಗೂ ವಿವಿಧ ಸಂಘಟನೆಗಳ ಸಾಯೋಗದಲ್ಲಿ ...Read more" } ", "keywords": "Node", "url": "https://dashboard.publicnext.com/node" }
ಸಿದ್ದಾಪುರ : ತಾಲೂಕು ಆಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಪಟ್ಟಣ ಪಂಚಾಯತ್, ತಾಲೂಕ ಪಂಚಾಯತ್ ಹಾಗೂ ವಿವಿಧ ಸಂಘಟನೆಗಳ ಸಾಯೋಗದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಕಾರ್ಯಕ್ರಮ ಸಿದ್ದಾಪುರದಲ್ಲಿ ವಿಜೃಂಭಣೆಯಿಂದ ನಡೆಯಿತು.
ತಹಶೀಲ್ದಾರ್ ಕಚೇರಿಯಿಂದ ಬಾಲ ಭವನದವರೆಗೆ ಪಟ್ಟಣದ ಪ್ರಮುಖ ರಸ್ತೆಯಲ್ಲಿ ಡೊಳ್ಳು ಕುಣಿತದೊಂದಿಗೆ ನಾರಾಯಣ ಗುರುಗಳ ಭಾವಚಿತ್ರದ ಮೆರವಣಿಗೆಯು ನಡೆಯಿತು. ಸಭಾ ಕಾರ್ಯಕ್ರಮವನ್ನು ತಾಲೂಕ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ಕೆ ಜಿ ನಾಗರಾಜ ಉದ್ಘಾಟಿಸಿದರು, ತಹಶೀಲ್ದಾರ್ ಎಮ್ ಆರ್ ಕುಲಕರಣಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಪ್ರಾಸ್ತಾವಿಕ ಮಾತನಾಡಿದರು.
ಸಮಾಜದ ಪ್ರಮುಖರಾದ ಕೆ ಜಿ ನಾಯ್ಕ್, ವಸಂತ ನಾಯ್ಕ್ ಇ ಒ ದೇವರಾಜ ಹಿತ್ತಲಕೊಪ್ಪ ಮಾತನಾಡಿದರು. ಉಪನ್ಯಾಸಕ ರತ್ನಾಕರ ನಾಯ್ಕ್ ನಾರಾಯಣ ಗುರುಗಳ ಕುರಿತು ಉಪನ್ಯಾಸ ನೀಡಿದರು.
ವಿವಿಧ ಕ್ಷೇತ್ರದ ಸಾಧಕರು ಹಾಗೂ ಸಮಾಜದ ಹಿರಿಯರನ್ನು ಸನ್ಮಾನಿಸಿ ಗೌರವಿಸಲಾಯಿತು. ಸಮಾಜದ ಮುಖಂಡರಾದ ಆನಂದ ನಾಯ್ಕ್,ವಿ ಎನ್ ನಾಯ್ಕ್, ವೀರಭದ್ರ ನಾಯ್ಕ್ ವಿನಾಯಕ ನಾಯ್ಕ್ ಇಂದಿರಾ ನಾಯ್ಕ್ ಮತ್ತಿತರರು ಉಪಸ್ಥಿತರಿದ್ದರು.
Kshetra Samachara
07/09/2025 01:44 pm