", "articleSection": "Health & Fitness,Law and Order,Government", "image": { "@type": "ImageObject", "url": "https://prod.cdn.publicnext.com/s3fs-public/222042-1757233379-Canva---2025-09-07T135256.245.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "PublicNext" }, "editor": { "@type": "Person", "name": "Vijay.Kumar" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": " ದಾವಣಗೆರೆ: ನಗರದ 15 ಕೇಶ ಕಸಿ ಕ್ಲಿನಿಕ್‌ಗಳ ಮೇಲೆ ಏಕಕಾಲಕ್ಕೆ ದಾಳಿ ನಡೆಸಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗಳ ತಂಡ, ಅನಧಿ...Read more" } ", "keywords": "hair transplant clinics in Davanagere, raid on hair transplant clinics, Davanagere authorities crackdown, hair restoration services, unlicensed clinics, health department inspection, Davanagere news, ", "url": "https://dashboard.publicnext.com/node" }
ದಾವಣಗೆರೆ: ನಗರದ 15 ಕೇಶ ಕಸಿ ಕ್ಲಿನಿಕ್‌ಗಳ ಮೇಲೆ ಏಕಕಾಲಕ್ಕೆ ದಾಳಿ ನಡೆಸಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗಳ ತಂಡ, ಅನಧಿಕೃತವಾಗಿ ಕಾರ್ಯನಿರ್ವಹಿಸುತ್ತಿದ್ದ ಚಿಕಿತ್ಸಾಲಯಗಳ ಬಾಗಿಲು ಮುಚ್ಚಿಸಿದೆ.
ಭಾರತೀಯ ಚರ್ಮರೋಗ, ರತಿರೋಗ ಹಾಗೂ ಕುಷ್ಠರೋಗ ತಜ್ಞರ ಸಂಘ ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ಅವರಿಗೆ ಈಚೆಗೆ ನೀಡಿದ ದೂರು ಆಧರಿಸಿ ಈ ದಾಳಿ ನಡೆಸಲಾಗಿದೆ. 3 ಕ್ಲಿನಿಕ್‌ಗಳು ಕೆಲ ತಿಂಗಳ ಹಿಂದೆಯೇ ಬಾಗಿಲು ಮುಚ್ಚಿರುವುದು ಗೊತ್ತಾಗಿದೆ. ಉಳಿದ 12ರಲ್ಲಿ ಕೆಲವು ಪರವಾನಗಿ ಪಡೆದಿದ್ದರೂ ವೈದ್ಯಕೀಯ ಲೋಪ ಎಸಗಿರುವುದು ಪತ್ತೆಯಾಗಿವೆ.
'ವೈದ್ಯಕೀಯ ಚಿಕಿತ್ಸೆ ನೀಡುವ ಸಂಸ್ಥೆಗಳು ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ ಕಾಯ್ದೆಯಡಿ (ಕೆಪಿಎಂಇ) ಪರವಾನಗಿ ಪಡೆಯುವುದು ಕಡ್ಡಾಯ. ದಾಳಿಯ ವೇಳೆ ಅಗತ್ಯ ದಾಖಲೆಗಳನ್ನು ಒದಗಿಸಲು ವಿಫಲವಾದ ಕ್ಲಿನಿಕ್‌ಗಳ ಬಾಗಿಲು ಮುಚ್ಚಿಸಲಾಗಿದೆ. ಈ ಕುರಿತು ಸಕ್ಷಮ ಪ್ರಾಧಿಕಾರಕ್ಕೆ ವರದಿ ಸಲ್ಲಿಸಲಾಗುವುದು' ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಎಸ್. ಷಣ್ಮುಖಪ್ಪ ತಿಳಿಸಿದರು.
ಅನಧಿಕೃತವಾಗಿ ಕಾರ್ಯನಿರ್ವಹಿಸುತ್ತಿರುವ ಕೇಶ ಕಸಿ ಕ್ಲಿನಿಕ್‌ಗಳ ಪಟ್ಟಿಯನ್ನು ಹಿಡಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು 15 ತಂಡಗಳನ್ನು ರಚಿಸಿತ್ತು. ವೈದ್ಯಾಧಿಕಾರಿಗಳು ಹಾಗೂ ಅರೆ ವೈದ್ಯಕೀಯ ಸಿಬ್ಬಂದಿ ಪ್ರತಿ ತಂಡದಲ್ಲಿದ್ದರು. ಶಾಮನೂರು ರಸ್ತೆ, ರಾಮ್ ಅಂಡ್ ಕೊ ವೃತ್ತ, ಎಂಸಿಸಿ ಬಡಾವಣೆ, ಜೀವನ್ ಭೀಮಾ ನಗರ, ಪಿ.ಜೆ. ಬಡಾವಣೆ, ಕುವೆಂಪು ನಗರ, ವಿದ್ಯಾನಗರ, ದೇವರಾಜ ಅರಸು ಬಡಾವಣೆ ಸೇರಿ ನಗರದ ವಿವಿಧೆಡೆ ಏಕಕಾಲಕ್ಕೆ ದಾಳಿ ನಡೆಸಲಾಯಿತು.
ಅಧಿಕಾರಿಗಳ ತಂಡವನ್ನು ಕಂಡ ಕ್ಲಿನಿಕ್‌ಗಳ ಸಿಬ್ಬಂದಿ ಕಕ್ಕಾಬಿಕ್ಕಿಯಾಗಿದ್ದರು. ವೈದ್ಯರು, ಶುಶೂಷಕರು, ಅರೆ ವೈದ್ಯಕೀಯ ಸಿಬ್ಬಂದಿಯ ಮಾಹಿತಿ ಪಡೆದ ತಂಡ, ಕ್ಲಿನಿಕ್‌ಗಳಲ್ಲಿನ ಉಪಕರಣಗಳನ್ನು ಪರಿಶೀಲಿಸಿತು. ಔಷಧ, ರೋಗಿಗಳ ಮಾಹಿತಿಯನ್ನು ಕಲೆಹಾಕಿತು. ವೈದ್ಯರು, ಚಿಕಿತ್ಸೆ ಹಾಗೂ ದರಪಟ್ಟಿಯನ್ನು ಪ್ರದರ್ಶನ ಮಾಡದೇ ಇರುವುದನ್ನು ಪ್ರಶ್ನಿಸಲಾಯಿತು.
ಪರವಾನಗಿ ಪಡೆಯದೇ ಬಳಸುತ್ತಿದ್ದ ವೈದ್ಯಕೀಯ ಉಪಕರಣಗಳನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಲಾಗಿದೆ.
PublicNext
07/09/2025 01:54 pm