ನಂಜನಗೂಡು: ಕಪಿಲಾ ನದಿ ಸೇತುವೆ ಸಮೀಪ ನದಿ ಹಾಗೂ ಸ್ಮಶಾನ ಜಾಗ ಒತ್ತುವರಿ ಮಾಡಿಕೊಂಡಿರುವುದಾಗಿ ಆರೋಪಿಸಿ ಚಾಮಲಾಪುರ ಹುಂಡಿ ಗ್ರಾಮಸ್ಥರು ದಿಢೀರ್ ಪ್ರತಿಭಟನೆ ನಡೆಸಿದ್ದಾರೆ. ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಕಂದಾಯ ಇಲಾಖೆಯ ಅಧಿಕಾರಿಗಳ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾತ್ರೋರಾತ್ರಿ ನದಿಗೆ ಮಣ್ಣು ಹಾಕಿ ಮುಚ್ಚುತ್ತಿದ್ದಾರೆ. ಸ್ಮಶಾನ ಜಾಗವನ್ನೂ ಸಹ ಒತ್ತುವರಿ ಮಾಡಿದ್ದಾರೆಂದು ಆರೋಪಿಸಿ ಗ್ರಾಮಸ್ಥರು ತಾಲ್ಲೂಕು ಆಡಳಿತದ ವಿರುದ್ದ ಕಿಡಿಕಾರಿದ್ದಾರೆ.
ಪತ್ರ ಬರೆದು ಎರಡು ತಿಂಗಳಾದ್ರೂ ಯಾವುದೇ ಕ್ರಮ ಕೈಗೊಂಡಿಲ್ಲ. ಅಲ್ಲದೇ ಕಪಿಲಾ ನದಿ ಒಡಲಿಗೆ ಮಣ್ಣು ತುಂಬುವ ಕೆಲಸ ಭರದಿಂದಲೇ ಸಾಗುತ್ತಿದೆ. ಈ ಹಿನ್ನಲೆಯಲ್ಲಿ ಚಾಮಲಾಪುರ ಹುಂಡಿಯ ಗ್ರಾಮಸ್ಥರು ಒತ್ತುವರಿ ಜಾಗದಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಒಂದು ವೇಳೆ ಒತ್ತುವರಿ ತೆರವು ಮಾಡದಿದ್ದಲ್ಲಿ ತಾಲ್ಲೂಕು ಕಚೇರಿಯ ಆವರಣದಲ್ಲಿಯೇ ಅಂತ್ಯಕ್ರಿಯೆಗಳನ್ನು ನೆರವೇರಿಸುವ ಎಚ್ಚರಿಕೆ ನೀಡಿದ್ದಾರೆ.
PublicNext
07/09/2025 04:59 pm