ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೊಡಗು: ಮಡಿಕೇರಿಯಲ್ಲಿ ಸ್ಕ್ಯಾಡ್ರನ್ ಲೀಡರ್ ಅಜ್ಜಮಾಡ ದೇವಯ್ಯರ 60ನೇ ಪುಣ್ಯಸ್ಮರಣೆ

ಮಡಿಕೇರಿ: 1965ರ ಭಾರತ-ಪಾಕಿಸ್ತಾನ ಯುದ್ಧದಲ್ಲಿ ವೀರ ಮರಣ ಹೊಂದಿದ ಮಹಾವೀರ ಚಕ್ರ (ಮರಣೋತ್ತರ) ಪುರಸ್ಕೃತ ಸ್ಕ್ಯಾಡ್ರನ್ ಲೀಡರ್ ಅಜ್ಜಮಾಡ ಬಿ.ದೇವಯ್ಯ ಅವರ 60ನೇ ಪುಣ್ಯಸ್ಮರಣೆ ಕಾರ್ಯಕ್ರಮ ಮಡಿಕೇರಿಯಲ್ಲಿ ನಡೆಯಿತು.

ಕೊಡವ ಮಕ್ಕಡ ಕೂಟ ಮತ್ತು ಅಜ್ಜಮಾಡ ಕುಟುಂಬಸ್ಥರ ಸಹಯೋಗದಲ್ಲಿ ನಡೆದ ನಗರದ ಸ್ವಾ.ಲೀ ಅಜ್ಜಮಾಡ ಬಿ.ದೇವಯ್ಯ ವೃತ್ತದಲ್ಲಿ ಏರ್‌ ಮಾರ್ಷಲ್ ನಂದ ಕಾರ್ಯಪ್ಪ, ಮಾಜಿ ಸ್ಪೀಕರ್ ಕೆ.ಜಿ ಬೋಪಯ್ಯ, ಕೊಡವ ಮಕ್ಕಡ ಕೂಟದ ಅಧ್ಯಕ್ಷ ಬೊಳ್ಳಜೀರ ಬಿ. ಅಯ್ಯಪ್ಪ ಸೇರಿದಂತೆ ಜನಪ್ರತಿನಿಧಿಗಳು, ನಿವೃತ್ತ ಯೋಧರು, ವಿವಿಧ ಸಂಘ ಸಂಸ್ಥೆಗಳ ಪ್ರಮುಖರು ಹಾಗೂ ಸಾರ್ವಜನಿಕರು ದೇವಯ್ಯ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿ ಗೌರವ ಅರ್ಪಿಸಿದರು.

ಬಳಿಕ ಮಾತನಾಡಿದ ಕೊಡವ ಮಕ್ಕಡ ಕೂಟದ ಅಧ್ಯಕ್ಷ ಬೊಳ್ಳಜೀರ ಬಿ ಅಯ್ಯಪ್ಪ ವರ್ಷಂಪತಿ ನಡೆಸಿಕೊಂಡು ಬರುವಂತೆ ಈ ಭಾರಿಯೂ ಸ್ಕ್ಯಾಡ್ರನ್ ಲೀಡರ್ ಅಜ್ಜಮಾಡ ಬಿ.ದೇವಯ್ಯ ಅವರ 60ನೇ ಪುಣ್ಯಸ್ಮರಣೆ ಆಚರಿಸಿದ್ದೆವೆ ಪಾಕಿಸ್ತಾನ ಯುದ್ಧದಲ್ಲಿ ದೇವಯ್ಯ ಧರ್ಯ ಹಾಗೂ ಶತ್ರುಗಳ ಮೇಲೆ ನಡೆಸಿ ದೇಶಕ್ಕೆ ಹೆಸರನ್ನ ತಂದುಕೊಟ್ಟಿದ್ದಾರೆ. ಅದರಂತೆ ಇಂದಿನ ಯುವ ಪಿಳೀಗೆಯು ಅವರ ಆದರ್ಶಗಳನ್ನ ಮೈಗೂಡಿಸಿಕೊಳ್ಳಬೇಕು ಕರೆಕೊಟ್ಟರು.

Edited By : Vinayak Patil
PublicNext

PublicNext

07/09/2025 05:10 pm

Cinque Terre

18.27 K

Cinque Terre

0