ಗದಗ : ಬಸವ ಸಂಸ್ಕೃತಿ ಅಭಿಯಾನ ಜಿಲ್ಲೆಯಲ್ಲಿ ಸೆ 9, ರಂದು ಲಿಂಗಾಯತ ಮಠಾಧಿಪತಿಗಳ ಒಕ್ಕೂಟ, ಜಾಗತಿಕ ಲಿಂಗಾಯತ ಮಹಾಸಭಾ ಗದಗ ಜಿಲ್ಲಾ ಘಟಕ ಸೇರಿದಂತೆ ವಿವಿಧ ಸಂಘಟನೆಗಳ ಸಹಯೋಗದಲ್ಲಿ ನಗರದ ಶ್ರೀ ತೋಂಟದ ಸಿದ್ಧಲಿಂಗೇಶ್ವರ ಕಲ್ಯಾಣ ಕೇಂದ್ರ ನಡೆಯಲಿದೆ ಅಂತ ಮಾಜಿ ಶಾಸಕ ಡಿ. ಆರ್ ಪಾಟೀಲ ಮಾಹಿತಿ ನೀಡಿದರು.
ಭಾನುವಾರ ಜಗದ್ಗುರು ತೋಂಟದಾರ್ಯ ಮಠದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಬಸವ ಸಂಸ್ಕೃತಿ ಅಭಿಯಾನದ ನೇತೃತ್ವವನ್ನು ನಾಡೋಜ ಡಾ. ಬಸವಲಿಂಗ ಪಟ್ಟದ್ದೇವರು ಅಧ್ಯಕ್ಷರು, ಲಿಂಗಾಯತ ಮಠಾಧಿಪತಿಗಳ ಒಕ್ಕೂಟ, ಪೂಜ್ಯಶ್ರೀ ಡಾ. ಗಂಗಾ ಮಾತಾಜಿಯವರು ಬಸವಧರ್ಮ ಮಹಾಪೀಠ, ಕೂಡಲಸಂಗಮ, ಪೂಜ್ಯಶ್ರೀ ಡಾ. ಅಲ್ಲಮಪ್ರಭು ಮಹಾಸ್ವಾಮಿಗಳು ನಾಗನೂರು ರುದ್ರಾಕ್ಷಿಮಠ, ಬೆಳಗಾವಿ, ಪೂಜ್ಯಶ್ರೀ ಶಿವಾನಂದ ಮಹಾಸ್ವಾಮಿಗಳು ಸಿದ್ದೇಶ್ವರಮಠ, ಹಂದಿಗುಂದ, ಆಡಿ, ಪೂಜ್ಯಶ್ರೀ ಪ್ರಭು ಚನ್ನಬಸವ ಮಹಾಸ್ವಾಮಿಗಳು ಮೋಟಗಿಮಠ, ಅಥಣಿ ಇವರುಗಳು ವಹಿಸಿಕೋಳ್ಳಲಿದ್ದಾರೆ ಎಂದರು.
ಕಾರ್ಯಕ್ರಮದ ಸಾನಿಧ್ಯವನ್ನು ಪೂಜ್ಯಶ್ರೀ ಡಾ. ತೋಂಟದ ಸಿದ್ಧರಾಮ ಮಹಾಸ್ವಾಮಿಗಳು ಎಡೆಯೂರು ಶ್ರೀ ತೋಂಟದಾರ್ಯ ಸಂಸ್ಥಾನಮಠ, ಡಂಬಳ-ಗದಗ, ಪೂಜ್ಯಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳು ತರಳಬಾಳು ಜಗದ್ಗುರು ಶಾಖಾಮಠ, ಸಾಣೇಹಳ್ಳಿ, ಪೂಜ್ಯಶ್ರೀ ಅಭಿನವ ಶಿವಾನಂದ ಮಹಾಸ್ವಾಮಿಗಳು ಶಿವಾನಂದ ಬೃಹನ್ಮಠ, ಪೂಜ್ಯಶ್ರೀ ಮುಪ್ಪಿನ ಬಸವಲಿಂಗ ಮಹಾಸ್ವಾಮಿಗಳು ಅನ್ನದಾನೇಶ್ವರ ಸಂಸ್ಥಾನಮಠ, ಹಾಲಕೆರೆ ಪೂಜ್ಯಶ್ರೀ ನಿಜಗುಣ ಪ್ರಭು ಮಹಾಸ್ವಾಮಿಗಳು ಜಗದ್ಗುರು ತೋಂಟದಾರ್ಯ ಶಾಖಾಮಠ, ಮುಂಡರಗಿ ಸೇರಿದಂತೆ ಚರಗುರುಗಳು ವಹಿಸಿಕೋಳ್ಳಲಿದ್ದಾರೆ ಅಂತ ಡಿ. ಆರ್ ಪಾಟೀಲ ಹೇಳಿದರು.
PublicNext
07/09/2025 07:16 pm