ಶಿರಸಿ: ನಗರದ ನಾರಾಯಣ ಗುರು ನಗರದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 171ನೇ ಜಯಂತಿಯನ್ನು ಸಂಭ್ರಮ ಸಡಗರದಿಂದ ರವಿವಾರ ಆಚರಿಸಲಾಯಿತು.
ಈ ಕಾರ್ಯಕ್ರಮಕ್ಕೆ ಆಗಮಿಸಿದ ಶಾಸಕ ಭೀಮಣ್ಣ ನಾಯ್ಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಗ್ಯಾರಂಟಿ ಪ್ರಾಧಿಕಾರದ ಜಿಲ್ಲಾ ಅಧ್ಯಕ್ಷ ಸತೀಶ್ ನಾಯ್ಕ್, ಉದ್ಯಮಿ ಅಶ್ವಿನ್ ಭೀಮಣ್ಣ ನಾಯ್ಕ್, ಇಸಳೂರು ಗ್ರಾಪಂ ಅಧ್ಯಕ್ಷೆ ಲಕ್ಷ್ಮಿ ಶೆಟ್ಟರ್, ಸದಸ್ಯರಾದ ಪ್ರತಿಭಾ ಹೆಗಡೆ, ವಿವೇಕ್ ಪೂಜಾರಿ ಮುಂತಾದವರು ಇದ್ದರು.
Kshetra Samachara
07/09/2025 08:46 pm