ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಶಿವಮೊಗ್ಗ: ಪ್ರಕರಣ ದಾಖಲಿಸಿಕೊಂಡು ಕಾನೂನು ಕ್ರಮ- ಎಸ್ಪಿ ಮಿಥುನ್ ಕುಮಾರ್

ಶಿವಮೊಗ್ಗ: ಜಿಲ್ಲೆಯ ಸಾಗರದಲ್ಲಿ ಮೆರವಣಿಗೆ ಸಂದರ್ಭದಲ್ಲಿ ಗಣೇಶ ಮೂರ್ತಿಗೆ ಬಾಲಕರು ಅಪಮಾನ ಮಾಡಿರುವ ಘಟನೆ ನಡೆದಿದೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ಕಾನೂನು ಕ್ರಮ ಕೈಗೊಳ್ಳುವುದಾಗಿ ಎಸ್ಪಿ ಮಿಥುನ್ ಕುಮಾರ್ ತಿಳಿಸಿದ್ದಾರೆ.

ಸಾಗರದಲ್ಲಿ ಮಾತನಾಡಿದ ಅವರು, ಸಾಗರದಲ್ಲಿ ಗಣೇಶ ಮೂರ್ತಿ ಮೆರವಣಿಗೆ ವೇಳೆ ಬಾಲಕರು ಅಪಮಾನ ಮಾಡಿದ್ದಾಗಿ ತಿಳಿದು ಬಂದಿದೆ. ಈ ಘಟನೆ ಕುರಿತು ತಾಯಿ ಹಾಗೂ ಇಬ್ಬರು ಮಕ್ಕಳನ್ನು ವಿಚಾರಣೆ ನಡೆಸಲಾಗಿದೆ ಎಂದರು. ಈಗಾಗಲೇ ಘಟನೆ ಸಂಬಂಧ ಹಿಂದೂ ಪರ ಸಂಘಟನೆಗಳ ಮುಖಂಡರ ಜೊತೆಗೂ ಮಾತುಕತೆ ನಡೆಸಲಾಗಿದೆ. ಈ ಘಟನೆಯ ಬಗ್ಗೆ ಹಿಂದೂ ಸಂಘಟನೆಯ ಮುಖಂಡರಿಗೂ ಮನವರಿಕೆ ಮಾಡಿಕೊಡಲಾಗಿದೆ ಎಂದರು.

Edited By : Shivu K
PublicNext

PublicNext

07/09/2025 10:44 pm

Cinque Terre

21.84 K

Cinque Terre

1